ವೇಣುಧ್ವನಿ 90.4 ಎಫ್‌. ಎಮ್‌ನಲ್ಲಿ ಪಿಸಿಓಡಿ ಕುರಿತು ಚರ್ಚೆ, ಪರಿಹಾರ

Tone 90.4 F. Discussion on PCOD in M, Remedy

ವೇಣುಧ್ವನಿ 90.4 ಎಫ್‌. ಎಮ್‌ನಲ್ಲಿ ಪಿಸಿಓಡಿ ಕುರಿತು ಚರ್ಚೆ, ಪರಿಹಾರ 

ಬೆಳಗಾವಿ 17: ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಪೋನ್‌-ಇನ್ ಕಾರ್ಯಕ್ರಮ ನಡೆಸಲಾಯಿತು. ಮಂಗಳವಾರ ದಿನಾಂಕ 17ನೇ ಡಿಸೆಂಬರ 2024 ರಂದು ಬೆಳಗ್ಗೆ 10 ರಿಂದ 11 ಗಂಟೆ ವರೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿಸಿಓಡಿ ಕಾರಣ, ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಮತ್ತು ಚಿಕಿತ್ಸೆ ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಹಿತು. ಕಾರ್ಯಕ್ರಮದಲ್ಲಿ ಬೆಳಗಾವಿ ಕೆಎಲ್‌ಇ ಡಾ ಪ್ರಭಾಕರ ಕೋರೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಅಂಜಲಿ ಜೋಷಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪಿಸಿಓಡಿ ವಿಷಯ ಸಂಭಂದಿಸಿದ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್‌. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.