ಜೆ.ಇ.ಇ ಮೇನ್ಸ್‌ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Top Performers in JEE Mains Exam

ಜೆ.ಇ.ಇ ಮೇನ್ಸ್‌ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು 

ಧಾರವಾಡ 12: 2024-25ರ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಹೆಚ್ಚಿನ ವಿದ್ಯಾರ್ಥಿಗಳು ಜೆ.ಇ.ಇ ಪರೀಕ್ಷೆಯಲ್ಲಿ ಹಾಜರಾಗಿ ಒಟ್ಟು ಒಂಭತ್ತು (09) ವಿದ್ಯಾರ್ಥಿಗಳು ಜೆ.ಇ.ಇ. ಬಿ.ಇ/ಬಿ.ಟೆಕ್ ವಿಭಾಗದ  ಜೆ.ಇ.ಇ ಮೇನ್ಸ್‌ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಜೆ.ಇ.ಇ ಅಡ್ವಾನ್ಸ್‌-್ಡ ಪರೀಕ್ಷೆಗೆ ಅರ್ಹತೆ ಪಡೆದಿರುತ್ತಾರೆ. 

ಅನೇಕ ವಿದ್ಯಾರ್ಥಿಗಳು ಉತ್ತಮ ರಾ​‍್ಯಂಕಗಳನ್ನು ಪಡೆದು ಶ್ರೇಷ್ಠ ಸಾಧನೆಗೈದು ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರನ್ನು ಈ ಸಂಸ್ಥೆಯ ಪ್ರೇರಕ ಶಕ್ತಿಯಾಗಿರುವ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ಸ್ವಾಮೀಜಿ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ. ಅಜಿತ ಪ್ರಸಾದರವರು ತಿಳಿಸಿದ್ದಾರೆ.