ತೋರಣಗಲ್ಲು: ನಕಲಿ ವೈದ್ಯ ವೃತ್ತಿ ಮಾಡುತ್ತಿದ್ದ ಓರ್ವನ ಕ್ಲಿನಿಕ್ ಸೀಜ್
Toranagallu: Clinic of a fake doctor seized
ಬಳ್ಳಾರಿ 13: ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.
ಬಿ.ಎನ್.ವೀರೇಶ್ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ 10ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ ಓಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದನು.
ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಆದೇಶದ ಮೇರೆಗೆ ಸಂಡೂರು ತಾಲ್ಲೂಕು ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಕ್ಷಯರೋಗ ನಿರ್ಮೂನಾಧಿಕಾರಿ ಡಾ.ಇಂದ್ರಾಣಿ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್ ನೇತೃತ್ವದ ತಂಡವು ದಾಳಿ ನಡೆಸಿ, ಕ್ಲಿನಿಕ್ ನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಹಾಗಾಗಿ ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬಂದಲ್ಲಿ, ಅವರ ವೈದ್ಯಕೀಯ ಪದವಿ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ನಕಲಿ ವೈದ್ಯರು ಎಂದು ಕಂಡುಬಂದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ಕ್ರಮ ಜರುಗಿಸಲಾಗುವುದು. ದಾಳಿಯ ಸಂದರ್ಭದಲ್ಲಿ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಬಂಡೆಗೌಡ, ಆರೋಗ್ಯ ನೀರೀಕ್ಷಣಾಧಿಕಾರಿ ನಿಜಾಮುದ್ದೀನ್ ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 