ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ: ಪ್ರತಿಜ್ಞಾವಿಧಿ ಸ್ವೀಕಾರ
Touch Leprosy Awareness Campaign: Pledge Acceptance
ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ: ಪ್ರತಿಜ್ಞಾವಿಧಿ ಸ್ವೀಕಾರ
ಕೊಪ್ಪಳ 30: ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಅಂಗವಾಗಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನದಡಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರು ಪ್ರತಿಜ್ಞೆ ಬೋಧಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಇಂದು ನನ್ನ ಕುಟುಂಬ, ನೆರೆ-ಹೊರೆ ಹಾಗೂ ಸಮುದಾಯದಲ್ಲಿ ಯಾರೇ ಕುಷ್ಠರೋಗಿಗಳು ಕಂಡು ಬಂದರೆ, ಅವರಿಗೆ ಆರೋಗ್ಯ ಇಲಾಖೆಯಲ್ಲಿ ದೊರೆಯುವ ಉಚಿತ ಚಿಕಿತ್ಸೆಯನ್ನು ಕೊಡಿಸುತ್ತೇನೆ. ಕುಷ್ಠರೋಗಿಗಳನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಂಡು ಅವರ ಆತ್ಮಗೌರಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳುತ್ತೇನೆ. ಕುಷ್ಟರೋಗಕ್ಕೆ ಅಂಟಿಕೊಂಡಿರುವ ಕಳಂಕ ಹಾಗೂ ತಾರತಮ್ಯವನ್ನು ಹೋಗಲಾಡಿಸಲು ಬದ್ದನಾಗಿರುತ್ತೇನೆ ಹಾಗೂ ಕುಷ್ಠರೋಗಿಗಳಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡುತ್ತೇನೆ. ಕುಷ್ಠರೋಗ ಸಂಪೂರ್ಣ ಗುಣಪಡಿಸಬಹುದಾದ ರೋಗ ಎಂಬ ಮಾಹಿತಿಯನ್ನು ಸಮಾಜದಲ್ಲಿ ನೀಡುತ್ತೇನೆ. ಮಹಾತ್ಮ ಗಾಂಧೀಜಿಯವರ ಕನಸಾದ ಕುಷ್ಠರೋಗ ಮುಕ್ತ ಭಾರತವನ್ನು ಕಟ್ಟಲು ಕಾಯಾ, ವಾಚಾ, ಮಾನಸ ಶ್ರಮಿಸುತ್ತೇನೆ ಎಂದು ಈ ಮೂಲಕ ಪ್ರತಿಜ್ಞೆ ಮಾಡುತ್ತೇವೆ ಎಂದು ಎಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ ಪ್ರಕಾಶ ಹೆಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ನಂದಕುಮಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ಪೂಜಾರ, ಪಶು ಇಲಾಖೆ ಉಪನಿರ್ದೇಶಕ ಡಾ ಪಿ.ಎಂ.ಮಲ್ಲಯ್ಯ ಸೇರಿದಂತೆ ಇತರೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 