ಸ್ಪರ್ಶ ಕುಷ್ಟರೋಗ ಜಾಗೃತಿ ಅಭಿಯಾನ ಎಂ .ಡಿ.ಟಿ ಚಿಕಿತ್ಸೆ ಪಡೆಯಿರಿ ಕುಷ್ಟರೋಗ ತೊಲಗಿಸಿರಿ
Touch Leprosy Awareness Campaign Get MDT Treatment Get Rid of Leprosy
ಗದಗ 6: ಕುಷ್ಟರೋಗವು ಮೈಕೋಬ್ಯಾಕ್ಟೀರಿಯಾ ಲೆಫ್ರೆ ಎಂಬ ರೋಗಾಣುವಿನಿಂದ ಬರುತ್ತದೆ.ಇದು ಯಾವುದೇ ಪಾಪದ ಫಲವಲ್ಲ ದೇವರ ಶಾಪವಲ್ಲ .ಪ್ರಾರಂಭಿಕ ಹಂತದಲ್ಲಿಲಕ್ಷಣಗಳನ್ನುಗುರುತಿಸಿ ಎಂ.ಡಿ .ಟಿ ಚಿಕಿತ್ಸೆ ಪಡೆಯಿರಿ, ಕುಷ್ಟರೋಗ ತೊಲಗಿಸಿರಿ ಎಂದು ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ.ರಾಜೇಂದ್ರ ಎಸ್ಗಡಾದ ಅವರು ಹೇಳಿದರು.
ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯವು ನಗರ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಇಲ್ಲಿ ನನಗರ ಸಭೆ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ "ಸ್ಪರ್ಶ" ಕುಷ್ಟ ರೋಗ ಜಾಗೃತಿ ಅಭಿಯಾನ- 2026ರ ಅಂಗವಾಗಿ ಏರಿ್ಡಸಲಾಗಿದ್ದ ಶಾಲಾ ಮಕ್ಕಳಿಗೆ ಕುಷ್ಟ ರೋಗ ಕುರಿತು ಆರೋಗ್ಯ ಶಿಕ್ಷಣ ನೀಡುವ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಡಾ.ಗಡಾದ ಅವರು ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲ ದತಿಳಿಬಿಳಿ ಅಥವಾ ತಾಮ್ರ ವರ್ಣದ ಮಚ್ಚೆಗಳು ಕಾಣಿಸುವುದು, ದಪ್ಪದಾದ ಅಥವಾ ಹೊಳೆಯುವ ಎಣ್ಣೆ ಯುಕ್ತ ಚರ್ಮಗಂಟುಗಳು,
ಕಣ್ಣಿನರೆಪ್ಪೆಗಳನ್ನ ಮುಚ್ಚಲು ಅಸಮರ್ಥತೆ ಕೈಕಾಲುಗಳಲ್ಲಿ ಜೋಮು ಹಿಡಿದು ಸ್ಪರ್ಶ ಜ್ಞಾನವಿಲ್ಲದಿರುವುದು ,ಕೈ ಅಥವಾ ಕಾಲುಗಳಲ್ಲಿ ವಾಸಿಯಾಗದ ಹುಣ್ಣು ಬೆರಳು ಮಡಿಸಿಕೊಂಡಿರುವುದು ಇಂತಹ ಲಕ್ಷಣಗಳು ಕಂಡು ಬಂದರೆ ಪ್ರಾರಂಭಿಕ ಹಂತದಲ್ಲಿ ಗುರುತಿಸಿ ಕ್ರಮ ಬದ್ಧ ಚಿಕಿತ್ಸೆ ಪಡೆದಲ್ಲಿ ಅಂಗವಿಕಲತೆಯನ್ನು ತಡೆಗಟ್ಟಬಹುದು ಮತ್ತು ಒಬ್ಬರಿಂದ ಮತ್ತೊಬ್ಬರಿಗೆ ಹರಡುವಸೋಂಕನ್ನ ನಿಲ್ಲಿಸಬಹುದಾಗಿದೆ ಎಂ.ಡಿ.ಟಿ ಚಿಕಿತ್ಸೆ ಪರಿಣಾಮಕಾರಿ ಹಾಗೂಸರಳವಾಗಿದ್ದು ಈ ಓಷಧಿಗಳು ಎಲ್ಲ ಸರ್ಕಾರ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುತ್ತವೆ ಎಂದರಲ್ಲದೆ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕುಷ್ಟರೋಗದ ಪ್ರತಿಜ್ಞಾವಿಧಿಯನ್ನ ಬೋಧಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನುಮಹಾವಿದ್ಯಾಲಯದ ಮುಖ್ಯೋಪಾಧ್ಯಾಯರಾದ ಎಚ್‌ಆರ್.ಪಾಟೀಲ ಅವರು ವಹಿಸಿದ್ದರು.ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಮಹೇಶಕೊಪ್ಪಳ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವಿಜ್ಞಾನ ಶಿಕ್ಷಕಿಯರಾದ ಶೋಭಾ ದೊಡ್ಡವಾಡ ಅವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿ ಕನುಡಿಗಳ ನಾಡಿದರು.ಆರೋಗ್ಯ ನೀರೀಕ್ಷನಾಧಿಕಾರಿ ಸಹಜಾನಂದ್ಸಾಸ್ವಿ ್ಡಳ್ಳಿ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ ವರ್ಗ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 