ಪ್ರವಾಸೋದ್ಯಮ ಇಲಾಖೆ: ಆಕ್ಷೇಪಣೆಗಳಿಗೆ ಆಹ್ವಾನ

Tourism Department: Invitation to objections

ಪ್ರವಾಸೋದ್ಯಮ ಇಲಾಖೆ: ಆಕ್ಷೇಪಣೆಗಳಿಗೆ ಆಹ್ವಾನ 

ಬಳ್ಳಾರಿ 25 :ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಜಿಲ್ಲೆಗೆ ನಿಗಧಿಪಡಿಸಿದ ಗುರಿಯಂತೆ ಆರ್ಜಿ ಆಹ್ವಾನಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ದಪಡಿಸಲಾಗಿದ್ದು, ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಸಲ್ಲಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. 

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊಸಪೇಟೆಯ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯ  ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. 

ಈ ಬಗ್ಗೆ ಆಕ್ಷೇಪಣೆಗಳು ಏನಾದರು ಇದ್ದಲ್ಲಿ ಮಾ.03 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. 

ಹೆಚ್ಚಿನ ಮಾಹಿತಿಗಾಗಿ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ವ್ಯಕ್ತಿ ಕಾಣೆ: ಪತ್ತೆಗೆ ಮನವಿ 

ಬಳ್ಳಾರಿ 25 :ತಾಲ್ಲೂಕಿನ ಸಂಗನಕಲ್ಲು ಗ್ರಾಮದ 2ನೇ ವಾರ್ಡ್‌ನ ಶಿವಬಸಮ್ಮ ಕಾಲೋನಿಯ  ನಿವಾಸಿ ಹನುಮನಗೌಡ ಎನ್ನುವ 35 ವರ್ಷದ ವ್ಯಕ್ತಿಯು ಫೆ.22 ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಸಬ್ ಇನ್ಸ್‌ ಪೆಕ್ಟರ್ ಮನವಿ ಮಾಡಿದ್ದಾರೆ. 

ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5.6 ಅಡಿ, ದುಂಡು ಚುಕ್ಕಿ ಚುಕ್ಕಿ ಮುಖ, ಕೆಂಪು ಮೈಬಣ್ಣ, ದೃಢವಾದ ಮೈಕಟ್ಟು, ಕಪ್ಪು ಕೂದಲು, ಬಲಗಾಲು ಮೀನುಗಂಡೆಯ ಮೇಲೆ ಕಪ್ಪು ಮಚ್ಚೆ ಹೊಂದಿರುತ್ತಾನೆ. 

ಕಾಣೆಯಾದ ಸಂದರ್ಭದಲ್ಲಿ ಕಂದು ಬಣ್ಣದ ಹಾಪ್ ಟೀ ಶರ್ಟ್‌, ಟೀಶರ್ಟನ ಬಲತೋಳಿಗೆ 3 ಅಂತ ಅಚ್ಚೆ ಇರುತ್ತದೆ. ಕಂದು ಬಣ್ಣದ ನೈಟ್  ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ. 

ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಅಥವಾ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.08392276461, ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.