ರಾಜ್ಯದ ಕರಾವಳಿಯ 10 ದ್ವೀಪಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಸಚಿವ ಮಂಕಾಳ ವೈದ್ಯ
Tourism development in 10 islands off the state's coast: Minister Mankala Vaidya
ಕಾರವಾರ 12: ರಾಜ್ಯದ ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸುವ ಉದ್ದೇಶದಿಂದ, ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳಲ್ಲಿನ 20 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದ್ದು, ಅವುಗಳಲ್ಲಿ ಈಗಾಗಲೇ 10 ದ್ವೀಪಗಳಲ್ಲಿ ಫಿಸಿಬಿಲಿಟಿ ಸರ್ವೇ ಮಾಡಿ, ಇಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬಹುದೆಂದು ವರದಿ ಪಡೆಯಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ. ಅವರು ಸೋಮವಾರ ಭಟ್ಕಳದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದ ಕರಾವಳಿ ಪ್ರದೇಶದಲ್ಲಿ ಸಿಆರ್‌ಝಡ್‌ನ ದೊಡ್ಡ ಸಮಸ್ಯೆ ಇದ್ದು, ಅದನ್ನು ಇತ್ಯರ್ಥಪಡಿಸಬೇಕಿದೆ. ಸಿ.ಆರ್.ಝಡ್ ನ ಪರಿಷ್ಕೃತ ಮ್ಯಾಫ್ ಅನುಮೋದನೆ ಮಾಡಲು ರಾಜ್ಯದಲ್ಲೇ ಇದುವರೆಗೆ ಯಾವುದೇ ಸಂಸ್ಥೆ ಇಲ್ಲವಾಗಿದ್ದು, ಇದಕ್ಕಾಗಿ ಪಕ್ಕದ ರಾಜ್ಯಗಳನ್ನು ಅವಲಂಬಿಸಬೇಕಿತ್ತು. ಅದರೆ ಪ್ರಸ್ತುತ ರಾಜ್ಯದಲ್ಲೇ ಸಿಆರ್‌ಝಡ್ ಮ್ಯಾಫ್ ಅನುಮೋದನೆ ಮಾಡುವ ಸಂಸ್ಥೆಯನ್ನು ಗುರುತಿಸಲಾಗಿದ್ದು, ಇದರಿಂದ ರಾಜ್ಯದಲ್ಲಿನ ಸಿಆರ್‌ಝಡ್ ಸಂಬಂದಿತ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯಲಿದೆ ಎಂದರು. ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೂಡಿಕೆದಾರರು ಮುಂದೆ ಬಂದಲ್ಲಿ , ಅವರಿಗೆ ಗತ್ಯವಿರುವ ಬ್ಯಾಂಕ್ ಸಾಲ, ಸಬ್ಸಿಡಿ, ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಹೂಡಿಕೆದಾರರಿಗೆ ಪೂರಕವಾದ ಎಲ್ಲಾ ರೀತಿಯ ಸೌಲಬ್ಯಗಳನ್ನು ಒದಗಿಸಲಾಗುವುದು ಎಂದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 