ಪಟ್ಟಣ ಪಂಚಾಯಿತಿಗೆ ನಿರ್ದೇಶಕರ ತಂಡ ಪರೀಶೀಲನಿಗೆ ಭೇಟಿ
Town Panchayat director's team visits Parisheel
ಹನುಮಸಾಗರ 05: ಪಟ್ಟಣ ಪಂಚಾಯತಿಗೆ ಜಿಲ್ಲಾ ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ ಹಾಗೂ ಅಧಿಕಾರಿ ತಂಡವು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಪರೀಶೀಲನೆ ನಡೆಸಿತು. ಪಟ್ಟಣದಲ್ಲಿ 2011ರ ಜನಗಣತಿಯ ಪ್ರಕಾರ ಜನಸಂಖ್ಯೆ ಗಣನೀಯವಾಗಿದ್ದು, ಪ್ರಸ್ತುತ ಪಟ್ಟಣದಲ್ಲಿ 750 ರಿಂದ 1000 ಜನಸಂಖ್ಯೆಯ ಆಧಾರದ ಮೇಲೆ ವಾರ್ಡ್ಗಳ ಮರುವಿಂಗಡಣೆ ಪ್ರಕ್ರಿಯೆ ನಡೆಯುತ್ತಿದೆ. ಈಗಿರುವ 14 ವಾರ್ಡ್ಗಳ ಸಂಖ್ಯೆ ಮುಂದಿನ ದಿನಗಳಲ್ಲಿ 15ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತಗಟ್ಟೆ ಕೇಂದ್ರಗಳು ಹಾಲಿ ಇರುವಂತೆಯೇ ಮುಂದುವರೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದರು.ಬೇಸಿಗೆ ಪ್ರಾರಂಭವಾಗಿರುವುದರಿಂದ ನೀರಿನ ಸಮಸ್ಯೆ ಕುರಿತು ಚರ್ಚಿಸಿ ನೀರಿನ ಸಮಸ್ಯೆ ಉಂಟಾಗದಂತೆ ಸೂಕ್ತ ತಯಾರಿ ಮಾಡಿಕೊಳ್ಳಬೇಕು ಎಂದು ವಿಶೇಷ ಸಭೆಯಲ್ಲಿ ಸೂಚಿಸಲಾಯಿತು.
ಆಸ್ತಿ ದಾಖಲೆಗಳ ಸಮಗ್ರ ಪರೀಶೀಲನೆ ಮಾಡಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗುತ್ತಿದೆ. ಅನುದಾನ ಹಂಚಿಕೆ ಪ್ರಕ್ರಿಯೆ ಸುಗಮಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.ಸಿಬ್ಬಂದಿ ನೇಮಕ, ಖಾತೆ ತೆರವು, ಫಾರ್ಮ-3 ಸಮಸ್ಯೆಪಟ್ಟಣದಲ್ಲಿ ವಿವಿಧ ವಿಭಾಗಗಳಲ್ಲಿ ಸಿಬ್ಬಂದಿ ಕೊರತೆ ಇರುವ ಬಗ್ಗೆ ಚರ್ಚೆ ನಡೆಯಿತು. ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡುವ ಕ್ರಮ ಕೈಗೊಳ್ಳಲಾಗುವುದು. ಖಾತೆ ತೆರೆಯುವ ಪ್ರಕ್ರಿಯೆ ಸರಳಗೊಳಿಸಲು ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯತಿ ಉತಾರ ಫಾರ್ಮ-3 ಕೆಲವರಿಗೆ ಲಭ್ಯವಾಗದ ಸಮಸ್ಯೆ ಬಗ್ಗೆ ಗಮನ ಸೆಳೆಯಲಾಗಿದ್ದು, ಅತಿ ಶೀಘ್ರದಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.ಈ ಸಂದರ್ಭದಲ್ಲಿ ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯತಿ ಸಿಬ್ಬಂದಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 