ಕೆನರಾ ಬ್ಯಾಂಕ್ ಒಳಗೆ ವಿಷಕಾರಿ ಸರ್ ಪತ್ತೆ! ಗ್ರಾಹಕರಲ್ಲಿ ಕ್ಷಣಕಾಲ ಗಾಬರಿ
Toxic sarin found inside Canara Bank! Momentary panic among customers
ಮುಂಡಗೋಡ 07: ತಾಲೂಕಿನ ಸಾಲಗಾಂವ್ (ಕಾವಲಕೊಪ್ಪ) ಗ್ರಾಮದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಳಗೆ ಬುಧವಾರ ವಿಷಕಾರಿ ನಾಗರಹಾವು ಕಾಣಿಸಿಕೊಂಡ ಘಟನೆ ನಡೆದಿದೆ. ಬ್ಯಾಂಕ್ ಆವರಣದಲ್ಲಿ ಅಚಾನಕ್ ಹಾವು ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ಹಾಗೂ ಗ್ರಾಹಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಯಿತು. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಮುತ್ತುರಾಜ ಹಳ್ಳಿ ಗಸ್ತು ಅರಣ್ಯ ಪಾಲಕರಿಗೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿಗಳು ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು ಯಾವುದೇ ಅಪಾಯ ಸಂಭವಿಸದಂತೆ ಅರಣ್ಯ ಪ್ರದೇಶಕ್ಕೆ ಬಿಡುವ ಮೂಲಕ ಯಶಸ್ವಿಯಾಗಿ ರಕ್ಷಣೆ ಕಾರ್ಯ ನಡೆಸಿದರು. ಈ ಕಾರ್ಯಾಚರಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ನವೀನ್ ಕುಮಾರ, ಸಿಬ್ಬಂದಿಗಳಾದ ಆಶಾ ತರಲಗಟ್ಟಿ ಸೇರಿದಂತೆ ಇತರರು ಸಹಕರಿಸಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 