ಕನ್ನಡೇತರರಿಗೆ ಕನ್ನಡ ಕಲಿಸುವ ಶಿಕ್ಷಕರಿಗೆ ತರಬೇತಿ
Training for teachers who teach Kannada to non-Kannada speakers
ಕನ್ನಡೇತರರಿಗೆ ಕನ್ನಡ ಕಲಿಸುವ ಶಿಕ್ಷಕರಿಗೆ ತರಬೇತಿ
ಬೆಳಗಾವಿ 04: ಕನ್ನಡೇತರರಿಗೆ ಕನ್ನಡ ಕಲಿಸುವ ಶಿಕ್ಷಕರಿಗೆ ತರಬೇತಿ ನೀಡುವ ಎರಡು ದಿನಗಳ ಶಿಬಿರವು ಕಳೆದ ಶನಿವಾರ ಮತ್ತು ನಿನ್ನೆ ರವಿವಾರದಂದು ನಾಗನೂರು ರುದ್ರಾಕ್ಷಿ ಮಠದ ಪಿ.ಯು ವಿಜ್ಞಾನ ಮಹಾವಿದ್ಯಾಲಯದಲ್ಲಿ ನಡೆಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೆ.ಎಲ್.ಇ.ವೇಣುಧ್ವನಿ ಹಾಗೂ ನಾಗನೂರು ರುದ್ರಾಕ್ಷಿ ಮಠದ ಸಹಯೋಗದಲ್ಲಿ " ನಾನು,ನಮ್ಮವರೊಂದಿಗೆ" ಸಂಸ್ಥೆಯು ಈ ಶಿಬಿರವನ್ನು ಆಯೋಜಿಸಿತ್ತು.
ರವಿವಾರ ಸಂಜೆ ನಡೆದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಅಶೋಕ ಚಂದರಗಿ ಅವರು ಶಿಬಿರಾರ್ಥಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಮಾಣ ಪತ್ರಗಳನ್ನು ವಿತರಿಸಿದರು.
ಶಿಬಿರದ ನಿರ್ದೇಶಕ ಬೆಂಗಳೂರಿನ ಪ್ರೊ.ಅಬ್ದುಲ್ ರೆಹಮಾನ್ ಪಾಶಾ, ಸಂಸ್ಥೆಯ ಪದಾಧಿಕಾರಿ ಜ್ಯೋತಿ ಬದಾಮಿ ಸಮಾರಂಭದಲ್ಲಿ ಉಪಸ್ಥಿತರಿದ್ದರು. 25 ಕ್ಕೂ ಅಧಿಕ ಶಿಬಿರಾರ್ಥಿಗಳು ಎರಡು ದಿನಗಳ ಕಾಲ ತರಬೇತಿ ಪಡೆದಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 