ಸಮಗ್ರ ಜಲ ಸಂಪನ್ಮೂಲ ಸಂರಕ್ಷಣೆ- ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ
Training program on integrated water resource conservation and management
ಧಾರವಾಡ 23: ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಧಾರವಾಡ ವತಿಯಿಂದ ನೀರಾವರಿ ಯೋಜನೆಗಳ ವಲಯ (ಐ.ಪಿ.ಝಡ್.) ಅಚ್ಚುಕಟ್ಟು ಪ್ರದೇಶದ ಬೀದರ ಜಿಲ್ಲೆಯ ಬೀದರ ತಾಲೂಕಿನಡಿ ಬರುವ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ, ಸದಸ್ಯರಿಗೆ ಹಾಗೂ ರೈತರಿಗೆ ಸಮಗ್ರ ಜಲ ಸಂಪನ್ಮೂಲ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತು ತರಬೇತಿಯನ್ನು ದಿ. 23ರಂದು ಕೃಷಿ ವಿಜ್ಞಾನ ಕೇಂದ್ರ, ಜಾನವಾಡದಲ್ಲಿ ಹಮ್ಮಿಕೊಳ್ಳಲಾಗಿತ್ತು. ಡಾ. ಉಮೇಶ ಬಾರಿಕರ, ಹಿರಿಯ ವಿಜ್ಞಾನಿ ್ಘ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಬೀದರ ರವರು ತರಬೇತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯುವ ತಾಂತ್ರಿಕತೆಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಕೆವಿಕೆಯಿಂದ ದೊರಕುವ ಸೌಲಭ್ಯಗಳನ್ನು ತಿಳಿಸಿದರು ಹಾಗೂ ರೈತರ ಪ್ರಶ್ನೆಗಳಿಗೆ ವಿವರಣೆ ನೀಡಿದರು.
ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ನಿರ್ದೇಶಕರಾದ ಡಾ. ಗೀರೀಶ ಎನ್. ಮರಡ್ಡಿಯವರು ಜಲಾಶಯದ ನೀರಿನ ಸಮರ್ಕ ಬಳಕೆಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಪಾತ್ರ ಅತೀ ಮುಖ್ಯವಾದದ್ದು ಎಂದು ತಿಳಿಸಿದರು. ಅಲ್ಲದೇ ಅಚ್ಚುಕಟ್ಟು ಪ್ರದೇಶದಲ್ಲಿ ಪಶು ಆಧಾರಿತ ಕೃಷಿ, ಕೃಷಿ ತಾಂತ್ರಿಕತೆಗಳು, ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಕಡಿಮೆ ನೀರು ಬಳಕೆಯಿಂದ ಅಧಿಕ ಇಳುವರಿ ಪಡೆಯುವ, ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವ ವಿಧಾನ ಕುರಿತು ಮಾಹಿತಿ ನೀಡುವುದಲ್ಲದೆ, ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆ, ನೀರಿನ ಕರ ಆಕರಣೆ / ಸಂಗ್ರಹಣೆ ಕುರಿತು ಮಾಹಿತಿ ನೀಡಿದರು. ವಾಲ್ಮಿ, ಧಾರವಾಡ ಸಂಸ್ಥೆಯಿಂದ ಈ ಎಲ್ಲ ವಿಷಯ ಕುರಿತು ತರಬೇತಿಗಳನ್ನು ನೀಡುತ್ತಿದ್ದು ಅದರ ಪ್ರಯೋಜನವನ್ನು ಪ್ರತಿಯೊಂದು ನೀ.ಬ.ಸ.ಸಂಘದ ಪದಾಧಿಕಾರಿಗಳು, ಸದಸ್ಯರು ್ಘ ರೈತರು ಪಡೆದುಕೊಳ್ಳುವಂತೆ, ಹೆಚ್ಚು ಹೆಚ್ಚು ಸದಸ್ಯರು ತರಬೇತಿಗೆ ಹಾಜರಾಗುವಂತೆ ಕರೆ ನೀಡಿದರು.
ಡಾ. ಚಂದ್ರಕಾಂತ, ವಿಜ್ಞಾನಿಗಳು (ಮಣ್ಣು ವಿಜ್ಞಾನ), ಕೃಷಿ ವಿಜ್ಞಾನ ಕೇಂದ್ರ, ಬೀದರ ಇವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಹಾಗೂ ವಂದನಾರೆ್ಣ ಮಾಡಿದರು. ಶ್ರೀ ಸುರೇಶ ಕುಲಕರ್ಣಿ, ಸಮಾಲೋಚಕರು, ವಾಲ್ಮಿ, ಧಾರವಾಡ ಇವರು ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳನ್ನು ಹಾಗೂ ಸಂಘಗಳ ರಚನೆ, ಕಾರ್ಯ, ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು. ಅತಿಥಿಯಾಗಿ ಡಾ. ಪ್ರೀತಿ ರವರು ಭಾಗವಹಿಸಿದ್ದರು. ಡಾ. ಶಿವಕುಮಾರ ಚಿಂಚೋಳಿ, ವಿಜ್ಞಾನಿ (ಸಸ್ಯ ಸಂರಕ್ಷಣೆ), ಕೃಷಿ ವಿಜ್ಞಾನ ಕೇಂದ್ರ, ಬೀದರ ರವರು ಕೀಟರೋಗ ನಿವಾರಣೆ ಕುರಿತು ಉಪನ್ಯಾಸ ನೀಡಿದರು. ತರಬೇತಿ ಕಾರ್ಯಕ್ರಮದಲ್ಲಿ ಬೀದರ ತಾಲೂಕಿನಡಿಯ ನೀ.ಬ.ಸ.ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ರೈತರು ಹಾಗೂ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 