ಅಂತರ್ಜಾಲ ಬಳಕೆಯಲ್ಲಿ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯ ರಕ್ಷಣೆ ಕುರಿತ ತರಬೇತಿ ಕಾರ್ಯಕ್ರಮ

ಅಂತರ್ಜಾಲ ಬಳಕೆಯಲ್ಲಿ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯ ರಕ್ಷಣೆ ಕುರಿತ ತರಬೇತಿ ಕಾರ್ಯಕ್ರಮ Training program on internet safety and mental health protection


ವಿಜಯಪುರ 26: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ವತಿಯಿಂದ ಇದೇ ಡಿ.27 ರಿಂದ 29 ರವರೆಗೆ “ಕಿಶೋರಿ ನಾಯಕಿ ಹಾಗೂ ಕಿಶೋರ ನಾಯಕರಿಗಾಗಿ ಮೂರು ದಿನಗಳ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಾಳೆ (ದಿ.27 ರಂದು) ಅಂತರ್ಜಾಲ ಬಳಕೆಯಲ್ಲಿ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯ ರಕ್ಷಣೆ ಕುರಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಮಹಿಳಾ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಉದ್ಘಾಟಿಸಲಿದ್ದಾರೆ. ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಟಿಡಿಎಚ್ ನೆದರಲ್ಯಾಂಡ್‌ನ ಭಾರತ-ನೇಪಾಳ ರಾಷ್ಟ್ರೀಯ ನಿರ್ದೇಶಕ ಪಿ.ತಂಗಪರುಮಾಳ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಸವರಾಜ.ಎಲ್‌.ಲಕ್ಕಣ್ಣವರ, ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊಜ್ಯೋತಿ ಎ. ಉಪಾದ್ಯೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರಾಧ್ಯಾಪಕರಾದ  ಪ್ರೊ.ಸಕ್ಪಾಲ್ ಹೂವಣ್ಣ, ಪ್ರೊ.ಶಾಂತಾದೇವಿ ಟಿ, ಪ್ರೊ.ಲಕ್ಷ್ಮಿದೇವಿ ವೈ, ಪ್ರೊ.ಓಂಕಾರ ಕಾಕಡೆ ಉಪಸ್ಥಿತರಿರಲಿದ್ದಾರೆ. ಉದ್ಘಾಟನಾ ಸಮಾರಂಭದ ನಂತರ ‘ಮಾನಸಿಕ ಆರೋಗ್ಯ ಮತ್ತು ಸ್ವಾಥ್ಥ್ಯ’ ಎಂಬ ವಿಷಯದ ಕುರಿತು ನಡೆಯಲಿರುವ ಮೊದಲನೆಯ ಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊ.ಶಾಂತಾದೇವಿ ಟಿ ವಹಿಸಲಿದ್ದಾರೆ. ಮಧ್ಯಾಹ್ನ ಡಿಜಿಟಲ್ ಸುರಕ್ಷತೆ ಮತ್ತು ಅರಿವು’ ಎಂಬ ವಿಷಯದ ಕುರಿತು ನಡೆಯಲಿರುವ ಎರಡನೆಯ ಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊ. ಲಕ್ಷ್ಮೀದೇವಿ ವಾಯ್ ವಹಿಸಲಿದ್ದಾರೆ. 

ದಿ.28 ರಂದು ಕಿಶೋರಿ ನಾಯಕಿ ಹಾಗೂ ಕಿಶೋರ ನಾಯಕರಿಗೆ ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಲಿದ್ದು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರ್ ಗೌಡ ರಮತ್ನಾಳ್ ಉದ್ಘಾಟಿಸಲಿದ್ದಾರೆ. ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಟಿಡಿಎಚ್ ನೆದರಲ್ಯಾಂಡ್‌ನ ಭಾರತ-ನೇಪಾಳ ರಾಷ್ಟ್ರೀಯ ನಿರ್ದೇಶಕ ಪಿ.ತಂಗಪರುಮಾಳ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಅತಿಥಿಗಳಾಗಿ ವಿಜಯಪುರದ ಉಪ ಪೊಲೀಸ್ ವರಿಷ್ಠಾಧಿಕಾರಿ ಸುಲ್ಫಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಸವರಾಜ ಎಲ್‌. ಲಕ್ಕಣ್ಣವರ, ಕ್ರೀಡಾ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಜಕುಮಾರ ಮಾಲಿಪಾಟೀಲ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ ಭಾಗವಹಿಸಲಿದ್ದಾರೆ. ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ ಹಾಗೂ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕಿ ಪ್ರೊ ಜ್ಯೋತಿ ಎ. ಉಪಾದ್ಯೆ ಉಪಸ್ಥಿತರಿರಲಿದ್ದಾರೆ. ಸಂಜೆ ಮನರಂಜನಾ ಕಾರ್ಯಕ್ರಮಗಳು ಜರುಗಲಿವೆ.  

ದಿ.29 ರಂದು ನಡೆಯಲಿರುವ ರಾಜ್ಯ ಮಟ್ಟದ ಕಿಶೋರಿ ನಾಯಕಿಯರ ಒಕ್ಕೂಟ ಉದ್ಘಾಟನಾ ಸಮಾರಂಭವನ್ನು ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ.ಆರ್‌.ಸುನಂದಮ್ಮ ಉದ್ಘಾಟಿಸಲಿದ್ದು, ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಟಿಡಿಎಚ್ ನೆದರಲ್ಯಾಂಡ್‌ನ ಭಾರತ-ನೇಪಾಳ ರಾಷ್ಟ್ರೀಯ ನಿರ್ದೇಶಕ ಪಿ.ತಂಗಪರುಮಾಳ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್‌. ಹಾಗರಗಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಸವರಾಜ ಎಲ್‌. ಲಕ್ಕಣ್ಣವರ, ಮಹಿಳಾ ವಿವಿ ಪಿ.ಎಂ.ಇ.ಬಿ ನಿರ್ದೇಶಕ ಪ್ರೊ.ಪಿ.ಜಿ.ತಡಸದ ಭಾಗವಹಿಸಲಿದ್ದು, ಶಿಕ್ಷಣ ನಿಕಾಯದ ಡೀನ ಪ್ರೊ. ಸಕ್ಪಾಲ್ ಹೂವಣ್ಣ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ.ವಿ.ಸಾಲಿಮಠ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ ಉಪಸ್ಥಿತಲಿರಲಿದ್ದಾರೆ. ಮೂರು ದಿನಗಳಕಾಲ ನಡೆಯಲಿರುವ ವಿಶಿಷ್ಟ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಲಿರುವ 500ಕ್ಕೂ ಹೆಚ್ಚು ಕಿಶೋರಿ ನಾಯಕಿ ಹಾಗೂ ಕಿಶೋರ ನಾಯಕರು ಭಾಗವಹಿಸಲಿದ್ದಾರೆ ಎಂದು ವಿವಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.