ಮಕ್ಕಳ ರಕ್ಷಣಾ ವ್ಯವಸ್ಥೆ ಬಾಲ ನ್ಯಾಯ ಕಾಯ್ದೆ-2015 ಕುರಿತು ತರಬೇತಿ ಕಾರ್ಯಾಗಾರ
Training workshop on Child Protection System Juvenile Justice Act-2015
ಧಾರವಾಡ 21: ಕರ್ನಾಟಕರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗ, ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ, ಮಕ್ಕಳ ಸಹಾಯವಾಣಿ-1098/112 ಧಾರವಾಡಇವರ ಸಂಯುಕ್ತಾಶ್ರಯದಲ್ಲಿ“ ಜಿಲ್ಲಾ ಹಾಗೂ ತಾಲೂಕು ಮಟ್ಟದಪೊಲೀಸ್‌ಅಧಿಕಾರಿಗಳಿಗೆ” ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಇರುವ ಬಾಲ ನ್ಯಾಯ ಕಾಯ್ದೆ-2015, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಷೇಧಕಾಯ್ದೆ- 2012, ಬಾಲ್ಯ ವಿವಾಹ ನಿಷೇದ ಕಾಯ್ದೆ-2006, ಹಾಗೂ ಮಕ್ಕಳಿಗೆ ಸಂಬಂಧಪಟ್ಟ ವಿವಿಧ ಕಾನೂನುಗಳ” ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದಿ. 21ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಧಾರವಾಡ ಇಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ನಾಡಗೀತೆಯೊಂದಿಗೆ ಪ್ರಾರಂಭಿಸಲಾಯಿತು. ನೆರೆದಗಣ್ಯ ಮಾನ್ಯರಿಂದ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಉದ್ಘಾಟಕರಾಗಿ ಆಗಮಿಸಿದಂತಹ ಶೇಖರಗೌಡ ರಾಮತ್ನಾಳ, ಸದಸ್ಯರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇವರು ಮಾತನಾಡುತ್ತಾ ಬಾಲನ್ಯಾಯ ಕಾಯ್ದೆ 2015, ಬಾಲ್ಯವಿವಾಹ ನಿಷೇಧ ಕಾಯ್ದೆ2006, ಶಿಕ್ಷಣ ಹಕ್ಕು ಕಾಯ್ದೆ 2009, ಪೊಕ್ಸೊಆ್ಯಕ್ಟ 2012 ಜೊತೆಜೊತೆಯಾಗಿ ಕೆಲಸ ನಿರ್ವಹಿಸುವುದು ಅತೀ ಅವಶ್ಯವಾಗಿದೆ. ಹಿಂದಿನ ಕಾಲದಲ್ಲಿ ಪೊಲೀಸ್‌ಎಂದರೆ ಭಯದ ವಾತಾವರಣವಿತುಆದರೆಕಾಯ್ದೆ,
ಕಾನೂನು ಬದಲಾದಂತೆ ಪೊಲೀಸ್ ಇಲಾಖೆ ಜನಸ್ನೇಹಿ,ಮಕ್ಕಳ ಸ್ನೇಹಿ,ಹಾಗೂ ಮನೆಮನೆಗೆ ಪೊಲೀಸ್ ಕಾರ್ಯಕ್ರಮಗಳಿಂದ ಜನಸ್ನೇಹಿಯಾಗಿರುವುದು ಸಂತೊಷವಾಗಿದೆ. ಯಾಕೆಂದರೆ ಮಾನವ ಹಕ್ಕುಗಳು,ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಕೆಲಸ ನಿರ್ವಹಿಸುತ್ತಿದೆ. ಎಲ್ಲ ಇಲಾಖೆಯ ಅಧಿಕಾರಿಗಳು ಗಮನ ಹರಿಸಿ ಕಾರ್ಯಪ್ರವೃತ್ತರಾಗಬೇಕು.ಮಕ್ಕಳ ರಕ್ಷಣಾ ನೀತಿ 2016ರನ್ನು ಭದ್ರಪಡಿಸಲು, ಒತ್ತು ನೀಡಲು ಹಾಗೂ ಈ ನೀತಿಯನ್ನು ಅಳವಡಿಸಿಕೊಳ್ಳಲು ಮಕ್ಕಳ ರಕ್ಷಣಾಆಯೋಗವು ತರಬೇತಿಗಳನ್ನು ಆಯೋಜಿಸಿ, ಕಾರ್ಯರೂಪಕ್ಕೆತರಬೇಕಾಗಿದೆ.ಆದ್ದರಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಶಿಬಿರಾರ್ಥಿಗಳು ಸದರಿ ತರಬೇತಿಯ ಸದುಪಯೋಗವನ್ನು ಪಡೆಯಬೇಕೆಂದು ತಿಳಿಸಿದರು.
ನಂತರ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿವಹಿಸಿದ ಗೌರವಾನ್ವಿತ ನ್ಯಾಯಾಧೀಶರಾದ ಪರುಶರಾಮ ದೊಡ್ಡಮನಿ ಹಿರಿಯ ಸಿವಿಲ್ ನ್ಯಾಯಾಧೀಶರು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡರಿವರು ಮಾತನಾಡುತ್ತಾ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬ ನಾಗರಿಕನ ಕರ್ತವ್ಯಯವಾಗಿದೆ ಮಕ್ಕಳ ಹಕ್ಕುಗಳಿಗೆ ಚ್ಯತಿ ಬರದಂತೆ ಇಲಾಖಾ ಅಧಿಕಾರಿಗಳು ಕೆಲಸ ನಿರ್ವಹಿಸಿ ಮಕ್ಕಳ ಸರ್ವಾಂಗಿಣ ಅಭಿವೃಧ್ಧಿ ಶ್ರಮಿಸಬೇಕು ಎಂದರು.
ನಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ.ಹೆಚ್.ಹೆಚ್.ಕುಕನೂರ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ, ಧಾರವಾಡ ಇವರು ಮಾತನಾಡುತ್ತಾ ಮಕ್ಕಳ ಪರವಾಗಿ ಇರುವಂತಹ ಕಾನೂನುಗಳ ಕುರಿತು ಎಲ್ಲ ಇಲಾಖೆಯವರು ಕಾರ್ಯನಿರ್ವಹಿಸಬೇಕು. ಸದರಿ ತರಬೇತಿಯು ಉಪಯುಕ್ತವಾಗಿದೆ ಮಕ್ಕಳು ಶಾಲೆಯಲ್ಲಿ ಇರುವ ಹಾಗೆ ನೋಡಿಕೊಂಡರೆ ಮಕ್ಕಳಿಗೆ ಪೊಷಕಾಂಶಯುಕ್ತ ಆಹಾರವು ಶಾಲೆಯಲ್ಲಿ ಸಿಗುತ್ತದೆ.ಮಕ್ಕಳು ಕೆಲವೊಮ್ಮೆ ಶಾಲೆಗೆ ಹೋಗಲು ಆಸಕ್ತಿ ತೊರಿಸುವುದಿಲ್ಲ ಮಕ್ಕಳ ಮನವೊಲಿಸಿ ಮರಳಿ ಶಾಲೆಗೆ ದಾಖಲಿಸುವುದು ಶಿಕ್ಷಣ ಇಲಾಖೆ, ಸಮಾಜಕಲ್ಯಾಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಾರ್ಯನಿರ್ವಹಿಸಬೇಕು. ಇಲಾಖೆಗೆ ಹಲವಾರು ಕೆಲಸಗಳು ಇರುತ್ತದೆಆದರೆ ಮಕ್ಕಳಿಗೆ ಸಂಬಂಧಿಸಿದ ವಿಷಯಗಳು ಬಂದಾಗಆದ್ಯತೆ ಮೆರೆಗೆ ಕಾರ್ಯನಿರ್ವಹಿಸಬೇಕು. ಗ್ರಾಮ ಮಟ್ಟದಲ್ಲಿ ಇರುವ ಎಲ್ಲ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಬಾಲ್ಯ ವಿವಾಹ ಪ್ರಕರಣಗಳು ಆಗದಂತೆ ನಿಗಾವಹಿಸಬೇಕು.
ನಂತರ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಬಿ.ವಾಯ್ ಪಾಟೀಲ ಮಾತನಾಡುತ್ತಾ ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಪ್ರಕರಣಗಳ ನಿರ್ವಹಿಸುವಲ್ಲಿ ಪೊಲೀಸರ ಸಹಕಾರ ಉತ್ತಮವಾಗಿದೆ ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾದ ಸಂದರ್ಭದಲ್ಲಿ ನಮೂನೆ-ಎ ಮತ್ತು ಬಿ ಯನ್ನು ಮಕ್ಕಳ ಕಲ್ಯಾಣ ಸಮಿತಿ ನೀಡುವುದು ಅವಶ್ಯವಾಗಿದೆ ಪೋಕ್ಸೋ ಪ್ರಕರಣಗಳು ದಾಖಲಾದ ಸಂದರ್ಭದಲ್ಲಿ ಮಕ್ಕಳಿಗೆ ಹಾಗೂ ಕಟುಂಬದವರಿಗೆ ಆಪ್ತಸಮಾಲೋಚನೆಯ ಅತಿ ಅವಶ್ಯವಾಗಿದೆ. ಮಕ್ಕಳಿಗೆ ನ್ಯಾಯ ಕೊಡಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಕೆಲಸವಾಗಬೇಕಿದೆ. ಎಂದರು
ನಂತರ ಹರೀಶ ಜೋಗಿ ಕಾರ್ಯಕ್ರಮ ವ್ಯವಸ್ಥಾಪಕರು, ಯುನಿಸೆಫ್ ಮಕ್ಕಳ ಸಂರಕ್ಷಣಾಯೋಜನೆ, ಕೊಪ್ಪಳ. ಇವರು ನೆರೆದ ತರಬೇತುದಾರರಿಗೆ ಮಕ್ಕಳ ರಕ್ಷಣೆಗಾಗಿ ಇರುವ ಬಾಲ ನ್ಯಾಯ ಕಾಯ್ದೆ-2015, ಲೈಂಗಿಕ ದೌರ್ಜನ್ಯ ನಿಷೇಧಕಾಯ್ದೆ 2012, ಬಾಲ್ಯ ವಿವಾಹ ನಿಷೇದ ಕಾಯ್ದೆ-2006, ಮಕ್ಕಳ ರಕ್ಷಣಾ ನೀತಿ-2016, ಮಕ್ಕಳ ಸಹಾಯವಾಣಿ -1098/112 ಹಾಗೂ ಮಕ್ಕಳಿಗೆ ಸಂಬಂಧಪಟ್ಟ ವಿವಿಧ ಕಾನೂನುಗಳ” ಕುರಿತುಉಪನ್ಯಾಸವನ್ನು ಮನ ಮುಟ್ಟುವಂತೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವಿಜಯಕುಮಾರ ವಿ.ಟಿ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿಗಳು ಪೊಲೀಸ್ ಆಯುಕ್ತರ ಕಾರ್ಯಲಯ ನವನಗರ ಬಾಲ ನ್ಯಾಯ ಮಂಡಳಿ ಸದಸ್ಯರಾದ ಸಂಜಯ ಮುಖ್ಕೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕರೆಪ್ಪ ಕೌಜಲಗಿ ಇವರು ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಘಟಕದ ಸಿಬ್ಬಂದಿಗಳು ಹಾಗೂ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಸದರಿ ಮಾಹಿತಿಯ ವರದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಈ ಮೂಲಕ ವಿನಂತಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 