ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ
Transport workers' strike: Passengers' protest
ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ
ದೇವರಹಿಪ್ಪರಗಿ 05: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೆ ಪ್ರಯಾಣಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಮಂಗಳವಾರದಂದು ಸಾರಿಗೆ ಬಸ್ ನೌಕರರ ಹಾಗೂ ಸಂಘಟನೆಗಳ ಒಕ್ಕೂಟದ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದರ ಹಿನ್ನೆಲೆಯಲ್ಲಿ ಸಾರ್ವಜನಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ದರ್ಬಾರ ಜೋರಾಗಿ ನಡೆದಿತ್ತು.ಮುಖ್ಯಮಂತ್ರಿಗಳು ನಡೆಸಿದ ಮನವೊಲಿಕೆ ಪ್ರಯತ್ನ ವಿಫಲ ಹಾಗೂ ಒಂದು ದಿನ ಮಟ್ಟಿಗೆ ಮುಸ್ಕರಕ್ಕೆ ತಡೆ ನೀಡಿ ಕೋರ್ಟ್ ಆದೇಶ, ಇದರ ಮಧ್ಯಯೇ ಸಾರಿಗೆ ನೌಕರರ ಮುಷ್ಕರ. ಅವರ ವಿವಿಧ ಬೇಡಿಕೆಗಳಾದ ಸಾರಿಗೆ ನೌಕರರ 38ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು, ಹಿಂದಿನ 2024ರ ಜ 1ರಿಂದ ಅನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಬೇಕು, ಖಾಸಗೀಕರಣ ನಿಲ್ಲಬೇಕು, ವಿದ್ಯುತ್ ಚಾಲಿತ ಬಸ್ ನಲ್ಲೂ ಸಾರಿಗೆ ಸಂಸ್ಥೆ ಯ ಚಾಲಕರನ್ನೇ ನಿಯೋಜಿಸಬೇಕು ಎಂಬ ಹಲವಾರು ಬೇಡಿಕೆಗಳನ್ನಿಟ್ಟು ಸಾರಿಗೆ ನೌಕರರು ಮುಸ್ಕರಕ್ಕೆ ಇಳಿದಿದ್ದಾರೆ.
ಬಸ್ ಹಾಗೂ ಪ್ರಯಾಣಿಕರು ಇಲ್ಲದರಿಂದ ಬಸ್ ನಿಲ್ದಾಣ ಖಾಲಿ ಖಾಲಿ ಯಾಗಿದೆ. ಪ್ರಯಾಣಿಕರು ಪರ್ಯಾಯವಾಗಿ ವಿಜಯಪುರಕ್ಕೆ ಹೋಗಲು ಖಾಸಗಿ ವಾಹನದಲ್ಲಿ ರೂಪಾಯಿ 70-100 ಕೊಟ್ಟು ಪ್ರಯಾಣಿಕರು ತಮ್ಮ ದಿನ ನಿತ್ಯದ ಕೆಲಸಗಳಿಗೆ ಹೋಗಲು ಖಾಸಗಿ ವಾಹನದಲ್ಲಿ ಪ್ರಯಾಣ ಅನಿವಾರ್ಯವಾಗಿತ್ತು. ಸರಕಾರ ಈಗಲಾದರೂ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಿ ಮುಷ್ಕರ ಹಿಂಪಡೆಯಲು ಮನ ವಲಿಸಬೇಕು ಎಂದು ಸಾರ್ವಜನಿಕರ ಆಶಯವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 