ಅರುಣ ಐಹೊಳೆಗೆ ಸನ್ಮಾನ
Tribute to Aruna Aihole
ರಾಯಬಾಗ 13: ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಸೇವಾ ಸಮಿತಿ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಚಿತ್ರದುರ್ಗದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಶುಕ್ರವಾರ ಭೇಟಿಯಾದ ರಾಜ್ಯ ಉಪಾಧ್ಯಕ್ಷ ಅರುಣ ಐಹೊಳೆ ಅವರನ್ನು ಪೀಠಾಧ್ಯಕ್ಷ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀಯವರು ಸತ್ಕರಿಸಿ, ಆಶೀರ್ವಾದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದುರ್ಗದ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠ ಪೀಠಾಧ್ಯಕ್ಷ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಜೀಯವರು, ಅರುಣ ಐಹೊಳೆ ಅವರು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಹಾಗೂ ರಾಜ್ಯದ ತುಂಬಾ ಸಂಚರಿಸಿ ಸರ್ವ ಸಮಾಜದ ಮುಖಾಂತರ ಕೆಲಸ ಕಾರ್ಯಗಳನ್ನು ಮಾಡಿ ಕೀರ್ತಿ ಸಂಪಾದಿಸಬೇಕು ಎಂದು ಆಶೀರ್ವಾಚನ ಮಾಡಿದರು. ಅರುಣ ಐಹೊಳೆ ಅವರು ಮಾತನಾಡಿ, ತಮಗೆ ನೀಡಿದ ಜವಾಬ್ದಾರಿಯನ್ನು ವಹಿಸಿಕೊಂಡು, ಎಲ್ಲ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ, ಶ್ರೀಗಳ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ ಎಂದು ನುಡಿದರು.
ವಿವೇಕಾನಂದ ಯಮಕನಮರಡಿ, ಶ್ರೀಮಂತ ಕಾಂಬಳೆ, ಸುಭಾಸ್ ಮಲ್ಲಪ್ಪಗೊಳ, ದಯಾನಂದ ಬಂಬಲಾಡಿ, ಭರಮಪ್ಪ ಪೂಜಾರ, ಸಂಜೀವ ಮೈಶಾಳೆ, ಪ್ರಕಾಶ ತೇರದಾಳೆ, ಅಪ್ಪಾಸಾಬ ಕೆಂಗನ್ನವರ, ಸಂಗನಗೌಡ ಐಹೊಳೆ, ರಿತೇಶ್ ಅವಳೆ, ಮಾರುತಿ ಮಾಂಗ, ಅಜಿತ ಮಾಂಗ, ನೀಲಪ್ಪ ಐಹೊಳೆ ಸೇರಿ ಸಮಾಜದ ಮುಖಂಡರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 