ಸಂಜಯಕುಮಾರ ಬಿರಾದಾರಗೆ ಸನ್ಮಾನ
Tribute to Sanjay Kumar's brother
ಸಂಜಯಕುಮಾರ ಬಿರಾದಾರಗೆ ಸನ್ಮಾನ
ಧಾರವಾಡ 26: ಇತ್ತೀಚಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಂದ ಮೈ ಭಾರತ ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿಯನ್ನು ಪಡೆದಿರುವ ಸಂಜಯಕುಮಾರ ಬಿರಾದಾರ ಅವರನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಅನೇಕ ಗಣ್ಯರು ಹೃದಯಸ್ಪರ್ಶಿಯಾಗಿ ಸನ್ಮಾನಿಸಿದರು.
ಕೇಂದ್ರ ಸಚಿವರಾದ ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ, ಹುಬ್ಬಳ್ಳಿ ಧಾರವಾಡ ಮೇಯರ್ ಜ್ಯೋತಿ ಪಾಟೀಲ, ಜಿಲ್ಲಾಧಿಕಾರಿ ದಿವ್ಯ ಪ್ರಭು ಸೇರಿದಂತೆ ಅನೇಕರು ಹೃದಯ ಸ್ಪರ್ಶಿಯಾಗಿ ಸನ್ಮಾನಿಸಿದರು.ಸಮಾಜ ಸೇವೆ, ಯುವ ಜನ ಸಂಘಟನೆಯಲ್ಲಿ ಕ್ರೀಯಾಶೀಲವಾಗಿ ತೊಡಗಿಸಿಕೊಂಡಿರುವ ಸಂಜಯಕುಮಾರ ಬಿರಾದಾರ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ದೊರಕಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ ಎಂದರು.ಇದೇ ರೀತಿ ನಿಮ್ಮ ಸಾಧನೆಯ ಪರ್ವ ಮುಂದುವರೆಯಲಿ, ರಾಜ್ಯದ ಕೀರ್ತಿ ಇನ್ನಷ್ಟೂ ಹೆಚ್ಚಿಸಿ, ಸೇವೆಯನ್ನು ಉಸಿರಾಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.
ಈ ವೇಳೆ ಸಂಜಯಕುಮಾರ ಬಿರಾದಾರ ತಮಗೆ ಬಂದ ಮಾಯ್ ಭಾರತ ಎನ್‌ಎಸ್‌ಎಸ್ ಪದಕ, ಪ್ರಮಾಣಪತ್ರಗಳನ್ನು ಎಲ್ಲ ಗಣ್ಯರಿಗೆ ತೋರಿಸಿ ಅವರಿಂದ ಆಶೀರ್ವಾದ ಪಡೆದರು. ಎಲ್ಲರ ಆಶೀರ್ವಾದ ಬಲ, ತಂದೆತಾಯಿಯರ, ಗುರು ಹಿರಿಯರ ಅನುಗ್ರಹದಿಂದ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ, ಇನ್ನಷ್ಟು ಸೇವೆ ಮಾಡಲು ಈ ಪ್ರಶಸ್ತಿ ಪ್ರೇರಣೆಯಾಗಿದೆ, ನಿಮ್ಮೆಲ್ಲರ ಮಾರ್ಗದರ್ಶನ ನನ್ನ ಮೇಲಿರಲಿ ಎಂದು ಸಂಜಯಕುಮಾರ ತಾವು ಭೇಟಿ ಮಾಡಿದ ಪ್ರತಿಯೊಬ್ಬ ಗಣ್ಯರಿಂದ ಆಶೀರ್ವಾದ ಪಡೆದುಕೊಂಡರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 