ಪುರಸಭೆ ಅಧಿಕಾರಕ್ಕಾಗಿ ಸದಸ್ಯರಿಗೆ ಪ್ರವಾಸ ಭಾಗ್ಯ
ಹೂವಿನ ಹಡಗಲಿ 25: ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲು ನಿಗದಿಯಾಗಿದ್ದು .ಜ.30ಕ್ಕೆ ಚುನಾವಣೆ ನಡೆಯಲಿದ್ದು.ಅಧಿಕಾರ ಹಿಡಿಯಲು ಸದಸ್ಯರನ್ನು ಪ್ರವಾಸಕ್ಕೆ ಕರೆದೊಯ್ದಿದ್ದು.ರೇಸಾರ್ಟ್ ರಾಜಕೀಯಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರಿಂದ ಮುಂದಾಗಿದ್ದಾರೆ.ಇದೇ ತಿಂಗಳು 30 ರಂದು ಚುನಾವಣೆ ನಿಗದಿಯಾಗಿದೆ. ಇದರಿಂದಾಗಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಅಧ್ಯಕ್ಷ ಸ್ಥಾನ ಬಿಸಿಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಬಿ ವರ್ಗಕ್ಕೆ ಮೀಸಲಾಗಿದೆ. ಪುರಸಭೆಯಲ್ಲಿ 14 ಕಾಂಗ್ರೆಸ್, 9 ಬಿಜೆಪಿ ಸದಸ್ಯರಿದ್ದಾರೆ. ಒಬ್ಬ ಕಾಂಗ್ರೆಸ್ ಸದಸ್ಯರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಕಾಂಗ್ರೆಸ್‌ಗೆ ಬಹುಮತವಿದ್ದರೂ ಪಕ್ಷಾಂತರ ರಾಜಕಾರಣದಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಅಧಿಕಾರ ಪಡೆಯಲು ಜಿದ್ದಾಜಿದ್ದಿ ಏರ್ಪಟಟಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಬಿಜೆಪಿ ಹಾಗೂ ಕಾಂಗ್ರೆಸ್ಸಿನ 13 ಜನ ಬೆಂಬಲಿಗ ಸದಸ್ಯರೊಂದಿಗೆ ಪ್ರವಾಸಕ್ಕೆ ತೆರಳಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಎರಡೂ ಪಕ್ಷಗಳಲ್ಲಿ ಒಗ್ಗಟ್ಟಿಲ್ಲದಿರುವುದರಿಂದ ಯಾರಿಗೆ ಅಧಿಕಾರ ಸಿಗಲಿದೆ ಎಂಬ ಕುತೂಹಲ ಮೂಡಿದೆ. ಕೆಲವು ಸದಸ್ಯರು ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದ ನಾಯಕರ ಸಂಪರ್ಕಕ್ಕೂ ಸಿಗುತ್ತಿಲ್ಲ.