ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರನ್ನು ನಿರ್ಮಿಸುವವರೇ ನಿಜವಾದ ಶಿಕ್ಷಕರು: ಶ್ರೀಗಳು
True teachers are those who build responsible citizens in society: Shri
ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರನ್ನು ನಿರ್ಮಿಸುವವರೇ ನಿಜವಾದ ಶಿಕ್ಷಕರು: ಶ್ರೀಗಳು
ಬೆಳಗಾವಿ 31: ಶಿಕ್ಷಕರ ಪಾತ್ರ ಕೇವಲ ಶಾಲಾ ಕೊಠಡಿಗೆ ಮಾತ್ರ ಸೀಮಿತವಾಗಿಲ್ಲ. ಅದರಾಚೆಗೂ ಅದು ವ್ಯಾಪಿಸಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಸಮಾಜ ಸೇವೆ, ಕರುಣೆ, ಮಮಕಾರ, ಸಹಿಷ್ಣುತೆ ಇಂತಹ ಸಮಾಜಮುಖಿ ಮೌಲ್ಯಗಳನ್ನು ಬೆಳೆಸುತ್ತಾ ಅವರನ್ನು ಸಮಾಜದ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವವರೇ ನಿಜವಾದ ಶಿಕ್ಷಕರು ಎಂದು ಗದುಗಿನ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಇಂದು ಇಲ್ಲಿನ ಶಿವಬಸವ ನಗರದ ಶಿವಕುಮಾರ ಸಂಬರಗಿಮಠ ಸಭಾಭವನದಲ್ಲಿ ಸಿದ್ಧರಾಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸಿದ್ದರಾಮ ರೆಡ್ಡಿ ಅವರ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಬೀಳ್ಕೊಡುವ ಸಮಾರಂಭದ ಸಾನಿಧ್ಯವಹಿಸಿ ಆಶೀರ್ವಚನ ನೀಡುತ್ತಾ ಮಾತನಾಡಿದರು. ಮುಂದುವರೆದು ಮಾತನಾಡಿದ ಶ್ರೀಗಳು ಸಿದ್ಧರಾಮ ರೆಡ್ಡಿ ಅವರು ಮಾತು ಬೆಳ್ಳಿ ಮೌನ ಬಂಗಾರವೆಂಬಂತೆ ಹೆಚ್ಚು ಮಾತನಾಡದೆ ಮೌನವಾಗಿಯೇ ಇದ್ದುಕೊಂಡು ಪ್ರಾಮಾಣಿಕ, ದಕ್ಷ ಸೇವೆಯ ಮೂಲಕ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದರು. ಇವರ ಸೇವೆ ಸಮುದಾಯದ ಇತರ ಶಿಕ್ಷಕರಿಗೆ ಮಾದರಿ ಎಂದರು. ಕಾರ್ಯಕ್ರಮದಲ್ಲಿ ಶ್ರೀಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಾಚಾರ್ಯ ಸಿದ್ಧರಾಮ ರೆಡ್ಡಿ ತ್ರಿವಿಧ ದಾಸೋಹಿಗಳಾಗಿದ್ದ ಡಾ. ಶಿವಬಸವ ಮಹಾಸ್ವಾಮಿಗಳವರು ಸ್ಥಾಪಿಸಿದ ಸಂಸ್ಥೆಯಲ್ಲಿ ಸೇವೆ ಮಾಡುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ. ನಾನು ಕೌಟುಂಬಿಕವಾಗಿ ಸರ್ವ ಭಾಗ್ಯದಿಂದಿರಲು ಮತ್ತು ಸಾಮಾಜಿಕವಾಗಿ ಜನಪ್ರಿಯನಾಗಿರಲು ನಾಗನೂರು ರುದ್ರಾಕ್ಷಿ ಮಠದ ಶ್ರೀಗಳ ಆಶೀರ್ವಾದವೇ ಕಾರಣ. ಓರ್ವ ವ್ಯಕ್ತಿ ತನ್ನ ಸೇವಾ ಅವಧಿಯಲ್ಲಿ ಪ್ರಾಮಾಣಿಕವಾಗಿ ಸೇವಿ ಸಲ್ಲಿಸಿದರೆ ಎಲ್ಲ ಹುದ್ದೆಗಳು ಅವನನ್ನು ಅರಸಿಕೊಂಡು ಬರುತ್ತವೆ ಎಂಬುದಕ್ಕೆ ನಾನೇ ಉದಾಹರಣೆ. ನನ್ನ ಮೇಲಿರುವ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಯಿಂದ ನನ್ನ ಸೇವಾ ನಿವೃತ್ತಿಯ ನಂತರವೂ ಪದವಿ ಕಾಲೇಜಿನ ಜವಾಬ್ದಾರಿಯನ್ನು ಶ್ರೀಗಳು ನೀಡಿದ್ದಕ್ಕೆ ನಾನು ಚಿರರುಣಿ ಎಂದರು. ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಕಾರ್ಯದರ್ಶಿ ಎಸ್.ಪಿ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಪ್ರಾರಂಭದಲ್ಲಿ ಪ್ರಾಧ್ಯಾಪಕ ಏ.ಕೆ. ಪಾಟೀಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಶ್ವಿನಿ ಪಡೆಣ್ಣವರ ನಿರೂಪಿಸಿದರು ಕೊನೆಗೆ ಶಕುಂತಲಾ ಪಾಟೀಲ ವಂದಿಸಿದರು.
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ 