ಧಾರವಾಡ 17: ಧಾರವಾಡ ಜಿಲ್ಲೆಯಾದ್ಯಾಂತ ಜನೇವರಿ 2 ರಿಂದ 12 ರವರೆಗೆ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸೆ ಆದೋಲನ ಆಯೋಜಿಸಿದ್ದು, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಕ್ರೀಯವಾಗಿ ಭಾಗವಹಿಸಿ, ಸಮನ್ವಯತೆ ಕೆಲಸ ಮಾಡೆಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಜನೇವರಿ 2 ರಿಂದ ಆರಂಭವಾಗುವ ಆಂದೋಲನದಲ್ಲಿ ಜಿಲ್ಲೆಯ ವಿವಿಧ ಗುಂಪು, ಸಮುದಾಯ ಸೇರಿದಂತೆ ಸುಮಾರು 2,57,031 ಜನರನ್ನು ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆಗೆ ಒಳಪಡಿಸುವ ಗುರಿ ಹೊಂದಲಾಗಿದೆ. ಈಗಾಗಲೇ 1,157 ಜನರಿಗೆ ಜಿಲ್ಲೆಯಲ್ಲಿ ಕ್ಷಯರೋಗದ ಚಿಕಿತ್ಸೆ ನೀಡಲಾಗುತ್ತಿದೆ.
ಕ್ಷಯರೋಗವು ಮೈಕ್ರೋ ಬ್ಯಾಕ್ಟೀರಿಯಾದಿಂದ ಹರಡುವ ಒಂದು ಸಾಂಕ್ರಾಮಿಕ ರೋಗ. ಇದು ಸೋಂಕುಳ್ಳ ವ್ಯಕ್ತಿ ಸೀನಿದಾಗ ಮತ್ತು ಕೆಮ್ಮಿದಾಗ ಗಾಳಿಯ ಮೂಲಕ ಹರಡುತ್ತದೆ. ಚಿಕಿತ್ಸೆ ಪಡೆಯದ ಒಬ್ಬ ವ್ಯಕ್ತಿಯಿಂದ ಒಂದು ವರ್ಷದಲ್ಲಿ 10 ಅಥವಾ ಹೆಚ್ಚು ಜನರಿಗೆ ಸೊಂಕು ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಜನ ಸಾಮಾನ್ಯರಲ್ಲಿ ಕ್ಷಯರೋಗ ಕುರಿತು ಜಾಗೃತಿ, ತಿಳುವಳಿಕೆ ಮೂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಜಿಲ್ಲೆಯ 158 ಪ್ರದೇಶಗಳನ್ನು ಆಂದೋಲನಕ್ಕೆ ಆಯ್ಕೆ ಮಾಡಿದ್ದು, ಇಡಿ ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಆಂದೋಲನ ಆಯೋಜಿಸಲಾಗುವುದು. ಹೆಚ್ಚಾಗಿ ವೈದ್ಯಕೀಯ ಸೇವೆಯಿಂದ ದೂರವಿರುವ ಸಮುದಾಯದ ಜನರನ್ನು ಈ ಆಂದೋಲನದ ಮೂಲಕ ತಲುಪುವುದು ನಮ್ಮ ಉದ್ದೇಶವಾಗಿದೆ ಎಂದು ಸಿ.ಇ.ಓ ಡಾ.ಬಿ.ಸಿ.ಸತೀಶ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ಎಂ.ದೊಡ್ಡಮನಿ ಅವರು ಮಾತನಾಡಿ, ಆಂದೋಲನದ ಪೂರ್ವಸಿದ್ಧೆತೆ, ಸಿಬ್ಬಂದಿಗಳ ನೇಮಕ ಮತ್ತು ಆಯ್.ಇ.ಸಿ. ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ತನುಜಾ.ಕೆ.ಎನ್ ಅವರು ಮಾತನಾಡಿ, ಆಂದೋಲನದಲ್ಲಿ ಕೊಳಚೆ ಪ್ರದೇಶ, ತಾಂಡಾ, ಅಲೆಮಾರಿ ಜನವಸತಿ ಪ್ರದೇಶ ಸೇರಿದಂತೆ ಹಿಂದುಳಿದ, ವೈದ್ಯಕೀಯ ಸೌಲಭ್ಯ ವಿರಳವಾಗಿರುವ ಜನವಸತಿ ಪ್ರದೇಶಗಳನ್ನು ಆಂದೋಲನಕ್ಕೆ ಹೆಚ್ಚು ಒಳಪಡಿಸುವದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಗಿರಿಧರ ಕುಕನೂರ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿದರ್ೇಶಕ ಕೆ.ಎಸ್.ಪಾಟೀಲ, ಜಿಲ್ಲಾ ಆಯುಷ ಅಧಿಕಾರಿ ಡಾ.ಪವಾರ, ಸಂತಾನೋತ್ಪತಿ ಮತ್ತೂ ಮಕ್ಕಳ ಆರೋಗ್ಯ ಅಧಿಕಾರಿ ಡಾ. ಎಚ್.ಆರ್.ಪುಷ್ಪಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಾ. ಶ್ರೀಮತಿ.ಕುಕನೂರ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಂ.ನಿಂಬಣ್ಣವರ, ಜಿಲ್ಲಾ ಸವರ್ೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಶಿ ಪಾಟೀಲ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾತರ್ಾ ಸಹಾಯಕ ಅಧಿಕಾರಿ ಡಾ. ಎಸ್.ಎಂ.ಹಿರೇಮಠ, ಮಹಾನಗರ ಪಾಲಿಕೆಯ ಹೆರಿಗೆ ಆಸ್ಪತ್ರೆ ವೈಧ್ಯಾಧಿಕಾರಿ ಡಾ.ಶೋಭಾ ಮೂಲಿಮನಿ, ಭಾರತೀಯ ವೈದ್ಯಕೀಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಅಭಯ ಮಟಕರ, ಕೆ.ಎಚ್.ಪಿ.ಟಿ ಸಂಸ್ಥೆಯ ಸಂಯೋಜಕಿ ವಿಜಯಲಕ್ಷ್ಮಿ ಸೇರಿದಂತೆ ವಿವಿಧ ತಾಲೂಕಿನ ತಾಲೂಕಾ ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅಧಿಕಾರಿಗಳು, ವೈದ್ಯಕೀಯ ಅಧಿಕಾರಿಗಳು, ಪಾಲಿಕೆ ಆಸ್ಪತ್ರೆ ವೈದ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.