ಉಚಗಾಂವ ಗ್ರಾಮದಲ್ಲಿ ಅರಿಶಿನ -ಕುಂಕುಮ ಸಂಭ್ರಮ
Turmeric-Saffron Celebration in Uchagaon Village
ಬೆಳಗಾವಿ 21 : ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಆಯೋಜಿಸಲಾಗಿದ್ದ ’ಅರಿಸಿನ- ಕುಂಕುಮ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮದ ಮಹಿಳೆಯರ ಜೊತೆ ಸಂಭ್ರಮಿಸಿದರು.ಅರಿಸಿನ - ಕುಂಕುಮ ಕಾರ್ಯಕ್ರಮ ನಮ್ಮ ಸಂಸ್ಕೃತಿಯ ಭಾಗವಾಗಿದೆ. ನಮ್ಮ ಸಂಪ್ರದಾಯಗಳನ್ನು ಉಳಿಸಿ, ಬೆಳೆಸುವ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇನೆ. ಪ್ರತಿ ಊರಲ್ಲಿ 2-3 ದೇವಸ್ಥಾನಗಳನ್ನು ನಿರ್ಮಾಣ ಮಾಡಲಾಗಿದೆ. ಎಲ್ಲ ಜಾತಿ, ಜನಾಂಗದ ಜನರು ಒಟ್ಟಾಗಿರಬೇಕೆನ್ನುವುದೇ ನನ್ನ ಧ್ಯೇಯ. ನಾವೆಲ್ಲ ಒಂದು ಕುಟುಂಬದ ರೀತಿಯಲ್ಲಿ ಮುನ್ನಡೆಯೋಣ ಎಂದು ಸಚಿವರು ಹೇಳಿದರು.ಗ್ರಾಮದ ಅಭಿವೃದ್ಧಿಗೆ ನಿರಂತರ ಅನುದಾನ ಒದಗಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 