ಕೊಪ್ಫಳ ಸರ್ಕಾರ ಪದವಿ ಕಾಲೇಜಿನಲ್ಲಿ ಎರಡು ದಿನಗಳ ಉದ್ಯೋಗ ಕೌಶಲ್ಯ ಕಾರ್ಯಕ್ರಮ
Two-day job skills program at Koppal Government Degree College
ಕೊಪ್ಪಳ 16: “21ನೆಯ ಶತಮಾನವು ಕೌಶಲ್ಯಾಧಾರಿತ ಯುಗವಾಗಿದ್ದರೂ ಕೂಡ ಭಾರತದಲ್ಲಿ ಇನ್ನೂ ಜ್ಞಾನಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ, ಇದರಿಂದ ನಮ್ಮ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆದರೂ ಸಹ ಉದ್ಯೋಗ ಮತ್ತು ಓದ್ಯಮಿಕ ಕ್ಷೇತ್ರದಲ್ಲಿ ನೀರೀಕ್ಷಿಸಿದಷ್ಟು ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತಿಲ್ಲ,” ಎಂದು ಯಲಬುರ್ಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ. ಶಂಕರಯ್ಯ ಅಭಿಪ್ರಾಯ ಪಟ್ಟರು. ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಛ ಶಿಕ್ಷಣ ಅಭಿಯಾನದ ಅಡಿಯಲ್ಲಿ ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಭರವಸಾ ಕೋಶ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶವು ಅಂತಿಮ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಉದ್ಯೋಗ ಕೌಶಲ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಯೈ. ಬಿ. ಅಂಗಡಿಯವರು ಮಾತನಾಡಿ, “ಇಂದಿನ ಡಿಜಿಟಲ್ ಯುಗದಲ್ಲಿ ಶ್ರಮಕ್ಕಿಂತ ಕೌಶಲ್ಯಕ್ಕೆ ಹೆಚ್ಚಿನ ಬೇಡಿಕೆಯಿದ್ದು, ವಿದ್ಯಾರ್ಥಿಗಳು ಪದವಿಯ ಜೊತೆಗೆ ಕೌಶಲ್ಯವರ್ಧನೆಗೂ ಪ್ರಾಮುಖ್ಯತೆಯನ್ನು ನೀಡಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಲು ಮಹಾವಿದ್ಯಾಲಯವು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಿದೆ,” ಎಂದು ಹೇಳಿದರು.
ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪದವಿಯ ನಂತರ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಎರಡು ದಿನಗಳ ಉದ್ಯೋಗ ಕೌಶಲ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ನುರಿತ ತರಬೇತುದಾರರು ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯುವ ವಿಧಾನ ಮತ್ತು ಪ್ರಕ್ರಿಯೆಗಳ ಬಗ್ಗೆ ಎರಡು ದಿನಗಳ ಕಾಲ ಸಮಗ್ರ ಮಾಹಿತಿ ನೀಡಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಲೇಜಿನ ಉದ್ಯೋಗ ಭರವಸಾ ಕೋಶದ ಸಂಚಾಲಕರಾದ ಡಾ. ಎಸ್. ಬಾಲಾಜಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ಪ್ರೊ. ಪ್ರಕಾಶ್ ಗೌಡ ಎಸ್. ಯು, ಪಿಎಮ್ ಉಶಾ ಸಂಯೋಜಕರಾದ ಪ್ರೊ. ಸುಧಾ ಹೆಗಡೆ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಉಮೇಶರವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 