ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ಉಪನ್ಯಾಸ ಸರಣಿ
Two-day lecture series at Sri Krishnadevaraya University, Vijayanagara
ಬಳ್ಳಾರಿ,ನ.29: ಶೈಕ್ಷಣಿಕ ಹಾಗೂ ಸಂಶೋಧನಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಉಪನ್ಯಾಸಗಳಲ್ಲಿ ಭಾಗವಹಿಸುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಸಚಿವರಾದ ಪ್ರೊ.ಜಿ.ಪಿ ದಿನೇಶ್ ಅವರು ಹೇಳಿದರು.
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದಲ್ಲಿ ‘ರಾಸಾಯನಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳ ಕುರಿತು ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಗಳು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಉಪನ್ಯಾಸ ಸರಣಿಗಳಿಂದ ಸಮಗ್ರ ವಾತಾವರಣವನ್ನು ಒದಗಿಸಿಕೊಳ್ಳಬಹುದು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಪ್ರಸ್ತುತ ವಿದ್ಯಾರ್ಥಿ ಹಾಗೂ ಸಂಸ್ಥೆಯ ಅಭಿವೃದ್ಧಿಗೆ ಶ್ರಮಿಸಿದಂತಾಗುತ್ತದೆ. ಸಮಾಜಕ್ಕೆ ಶೈಕ್ಷಣಿಕ ಸೇವೆಯನ್ನು ಒದಗಿಸುವ ಮೂಲಕ ಜವಾಬ್ದಾರಿಯುತ ಸ್ಥಾನ ಪಡೆಯಬಹುದು ಎಂದು ಮಾತನಾಡಿದರು.
ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎನ್.ಎಮ್ ಸಾಲಿ ಮಾತನಾಡಿ, ಹಳೆಯ ವಿದ್ಯಾರ್ಥಿಗಳ ಸಂಘವು ವಿದ್ಯಾರ್ಥಿ ಮತ್ತು ಶಿಕ್ಷಣ ಸಂಸ್ಥೆಯ ನಡುವೆ ಬಲವಾದ ಬಾಂಧವ್ಯ ಸ್ಥಾಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ವಿಚಾರ ವಿನಿಮಯಕ್ಕಾಗಿ ಸೂಕ್ವವಾದ ವೇಧಿಕೆ ಒದಗಿಸಿದಂತಾಗುತ್ತದೆ. ಶೈಕ್ಷಣಿಕ ಪ್ರಗತಿಯ ಜೊತೆಗೆ ದೇಶವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶುದ್ಧ ವಿಜ್ಞಾನ ವಿಭಾಗದ ಡೀನ್ ಪ್ರೊ.ಖಡ್ಕೆ ಉದಯ ಕುಮಾರ್, ಕಾರ್ಯಕ್ರಮ ಸಂಚಾಲಕರಾದ ಪ್ರೊ.ಕೆ.ಎಸ್ ಲೋಕೇಶ್, ಸಹ ಸಂಚಾಲಕ ಡಾ.ಸಾದು ಸೂರ್ಯಕಾಂತ ಎಸ್., ಪ್ರೊ.ಅರುಣ್‌ಕುಮಾರ ಲಗಶೆಟ್ಟಿ ಉಪಸ್ಥಿತರಿದ್ದರು. ಎರಡು ದಿನಗಳ ಹಳೆಯ ವಿದ್ಯಾರ್ಥಿಗಳ ಉಪನ್ಯಾಸ ಸರಣಿಯಲ್ಲಿ ವಿಭಾಗದ ಸುಮಾರು 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 