ವಿಜಯನಗರ ಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಮೇಳಕ್ಕೆ ಚಾಲನೆ

Two-day science exhibition begins at Vijayanagara Krishnadevaraya University

ವಿಜಯನಗರ ಕೃಷ್ಣದೇವರಾಯ ವಿವಿಯಲ್ಲಿ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಮೇಳಕ್ಕೆ ಚಾಲನೆ 

ಬಳ್ಳಾರಿ 14 :ಭಾರತವು ಸಾಂಪ್ರದಾಯಿಕ ಸಂಶೋಧನೆಗಳ ತವರಾಗಿದ್ದು, ವಿನೂತನ ಸಂಶೋಧನೆಗಳ ಮೂಲಕ ವಿಶ್ವಕ್ಕೆ ಮಾದರಿಯಾಗಿದೆ ಎಂದು ಸೌತ್ ಅಮೇರಿಕದ ಚಿಲಿಯ ತರಪಾಕ ವಿಶ್ವವಿದ್ಯಾಲಯದ ನಿರ್ದೇಶಕರಾದ ಪ್ರೊ. ಡೇವಿಡ್ ಲಾರೋಝ್ ಹೇಳಿದರು. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಮೇಳವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ವಿಜ್ಞಾನವು ವಿಶ್ವದ ಎಲ್ಲೆಡೆ ವ್ಯಾಪಿಸಿದೆ. ವಿಜ್ಞಾನದ ಎಲ್ಲಾ ಅಂಶಗಳಿಗೆ ಇಂದು ನಾವು ಹತ್ತ್ತಿರವಾಗಿದ್ದೇವೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ನವೀನ ವಿಚಾರಧಾರೆಗಳನ್ನು ತಮ್ಮ ಸಂಶೋಧನೆಗಳಾಗಿ ಮಾರಿ​‍್ಡಸಲು  ಗಮನ ಹರಿಸಬೇಕು. ಆ ಮೂಲಕ ಹೊಸ ಅನ್ವೇಷಣೆ ಹಾಗೂ ವಿಚಾರಗಳು ಲಭಿಸುತ್ತವೆ. ವಿಜ್ಞಾನ ಕ್ಷೇತ್ರಕ್ಕೆ ಭಾರತೀಯರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು. ವಿಶ್ವವಿದ್ಯಾಲಯದ ಕುಲಸಚಿವರಾದ ಎಸ್‌.ಎನ್ ರುದ್ರೇಶ್ ಮಾತನಾಡಿ, ಹೊಸ ಅನ್ವೇಷಣೆಗಳತ್ತ ವಿದ್ಯಾರ್ಥಿಗಳು ಶ್ರಮಿಸಬೇಕು. ಇದರಿಂದ ಪಾಶ್ಚಿಮಾತ್ಯ ದೇಶಗಳಿಗೆ ತೆರಳಿ ಹೆಚ್ಚಿನ ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ. ಪ್ರಾಧ್ಯಾಪಕರು ವಿದ್ಯಾರ್ಥಿಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾರ್ಗದರ್ಶನ ಮಾಡಬೇಕು ಎಂದರು. ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಡಾ.ಎನ್‌.ಎಂ ಸಾಲಿ ಮಾತನಾಡಿ, ವಿಜ್ಞಾನ ಬೆಳೆದಷ್ಟು ಸವಾಲುಗಳು ಸಾಕಷ್ಟಿವೆ. ಇನ್ನೂ ಹಲವಾರು ಕ್ಷೇತ್ರಗಳಲ್ಲಿ ವಿಜ್ಞಾನದಿಂದ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಸಂಶೋಧನೆಗಳಲ್ಲಿ ಎಲ್ಲರೂ ಹೆಚ್ಚಾಗಿ ಭಾಗಿಯಾಗಬೇಕು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ. ಮುನಿರಾಜು ಮಾತನಾಡಿ, ಅಮೇರಿಕಾದಲ್ಲಿ ತಂತ್ರಜ್ಞಾನ ಎಷ್ಟೇ ಬೆಳೆದಿದ್ದರು ಅದನ್ನು ನಿರ್ವಹಿಸಲು ಭಾರತೀಯರ ಕೊಡುಗೆ ಅಪಾರವಾಗಿದೆ. ಸಂಶೋಧನೆ ಹಾಗೂ ಅಭಿವೃದ್ಧಿಗೆ ವಿದ್ಯಾರ್ಥಿಗಳು ಹೆಚ್ಚು ಮಹತ್ವ ನೀಡಬೇಕು. ಜಗತ್ತಿನಲ್ಲಿರುವ ನೈಜ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಕೇವಲ ಸಂಶೋಧನೆಯಿಂದ ಮಾತ್ರ ಸಾಧ್ಯ. ಸಂಶೋಧನೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲು ಮುಂಬರುವ ದಿನಗಳಲ್ಲಿ ಹಲವಾರು ಅಂತರಾಷ್ಟ್ರೀಯ ವಿಶ್ವವಿದ್ಯಾಲಯಗಳೊಂದಿಗೆ ಶೈಕ್ಷಣಿಕ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಸೌತ್ ಅಮೇರಿಕದ ಚಿಲಿಯ ತರಪಾಕ ವಿಶ್ವವಿದ್ಯಾಲಯದೊಂದಿಗೆ ಶೈಕ್ಷಣಿಕ ಒಡಂಬಡಿಕೆಗೆ ಪರಸ್ಪರ ಸಹಿ ಹಾಕುವುದರ ಮೂಲಕ ಒಪ್ಪಂದ ಮಾಡಿಕೊಳ್ಳಲಾಯಿತು. ಬಳಿಕ ವಿಜ್ಞಾನ ಪ್ರದರ್ಶನ ಮೇಳಕ್ಕೆ ಗಣ್ಯರು ಚಾಲನೆ ನೀಡಿದರು. ವಿವಿಯ ಎಲ್ಲ ವಿಜ್ಞಾನ ವಿಭಾಗಗಳ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಸಿದ್ಧಪಡಿಸಿರುವ 50ಕ್ಕೂ ಅಧಿಕ ವೈವಿಧ್ಯಮಯ ವಿಜ್ಞಾನ ಪ್ರಯೋಗಗಳ ಪ್ರದರ್ಶನ ನಡೆಯಿತು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಗಣಿತ ದಿನ (ವಿಶ್ವ ಪೈ ದಿನ) ವನ್ನು ಗಣಿತಶಾಸ್ತ್ರ ವಿಭಾಗದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅನ್ವಯಿಕ ವಿಜ್ಞಾನ ನಿಕಾಯದ ಡೀನರಾದ ಡಾ.ಶಶಿಕಾಂತ್ ಎಚ್‌.ಮಜಗಿ, ಶುದ್ಧ ವಿಜ್ಞಾನ ನಿಕಾಯದ ಡೀನರಾದ ಡಾ.ಹನುಮೇಶ್ ವೈದ್ಯ ಸೇರಿದಂತೆ ವಿವಿಧ ನಿಕಾಯಗಳ ಡೀನರು, ಎಲ್ಲ ವಿಜ್ಞಾನ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮವನ್ನು ಕುಮಾರಿ ಐಶ್ವರ್ಯ ನಿರೂಪಿಸಿದರು. ​‍್ರೊ.ತಿ​‍​‍್ೇರುದ್ರ​‍್ಪ.ಜೆ ಅತಿಥಿಗಳನ್ನು ಪರಿಚಯಿಸಿದರು. ಶನಿವಾರವು ಪ್ರದರ್ಶನ ಮೇಳ ಮುಂದುವರೆಯುವುದರಿಂದ ಆಸಕ್ತರು, ವಿದ್ಯಾರ್ಥಿಗಳು, ಸಾರ್ವಜನಿಕರು ಮುಕ್ತವಾಗಿ ಮೇಳ ವೀಕ್ಷಣೆಗೆ ಅವಕಾಶವಿದೆ.