ಭೂ ಗ್ಯಾರಂಟಿ ಸಮರಾ್ಣ ಸಮಾವೇಶಕ್ಕೆ ಎರಡು ಲಕ್ಷ ಜನರು ಬರಲಿವ ನೀರೀಕ್ಷೆ
Two lakh people expected to attend land guarantee protest rally
ಹಾವೇರಿ 12 :ನಗರದಲ್ಲಿ ಜರುಗುವ ಭೂ ಗ್ಯಾರಂಟಿ ಸಮರಾ್ಣ ಸಮಾವೇಶಕ್ಕೆ ಎರಡು ಲಕ್ಷ ಜನರು ಬರಲಿವ ನೀರೀಕ್ಷೆ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಈ ಸಮಾವೇಶದಲ್ಲಿ ಒಂದು ಲಕ್ಷ ಹತ್ತು ಸಾವಿರ ಭೂ ದಾಖಲೆಗಳ ಪಟ್ಟಾವನ್ನು ಪಲಾನುಭವಿಗಳಿಗೆ ನೀಡಲಾಗುತ್ತದೆ.ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ,ಕಂದಾಯ ಸಚಿವರಾದ ಕೃಷ್ಣಾ ಬೈರೇಗೌಡ,ಉಸ್ತುವಾರಿ ಸಚಿವ ಶಿವಾನಂದ ಪಾಟೀಲ,ಇನ್ನಿತರ ಸಚಿವರು,ಶಾಸಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಏಳು-ಎಂಟು ಜಿಲ್ಲೆಯಿಂದ ಪಲಾನುಭವಿಗಳು,ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಎರಡು ಲಕ್ಷ ಜನ ಬರುವ ನೀರೀಕ್ಷೆ ಇದೆ.ನುಡಿದಂತೆ ನಡೆದಿದ್ದೇವೆ.ನಮ್ಮ ಸರ್ಕಾರ ಈವರಿಗೆ ಎರಡು ಲಕ್ಷ ಇಪತ್ತೊಂದು ಸಾವಿರ ಪಟ್ಟಾ ನೀಡಿದೆ.ನಮ್ರತೆಯಿಂದ ಕೆಲಸ ಮಾಡುತ್ತೇವೆ.ಐದು ಗ್ಯಾರಂಟಿ ಜಾರಿಗೊಳಿಸಲಾಗಿದೆ.ಬಿಜೆಪಿಯವರು ಜನರಿಗೆ ಮೋಸ ಮಾಡಿದ್ದಾರೆ ಎಂದರು.ನಾಡಿನ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಬಜೆಟ್ ಅವರು ನೀಡಲಿದ್ದಾರೆ ಎಂದು ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹೇಳಿದರು.
ಲೋಕಸಭೆಯಲ್ಲಿ ಜನರ ಪರವಾಗಿ ಕೆಲಸ ಹಾಗೂ ಧ್ವನಿ ಎತ್ತುವ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಸ್ಪೀಕರ್ ಮಾತನಾಡಲು ಅವಕಾಶ ನೀಡದೇ ಇರುವುದು ಖಂಡನೀಯ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಸದನದಲ್ಲಿ ವಿಚಾರ ಮಂಡನೆ ಮಾಡಲು ಸಂವಿಧಾನಾತ್ಮಕ ಅವಕಾಶಗಳು ಇರುತ್ತೇವೆ. ಸ್ಪೀಕರ್ ಪಕ್ಷಪಾತ ಮಾಡಬಾರದು.
ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದರನ್ನು ಅಮಾನತು ಮಾಡಿದ್ದಾರೆ.ಸ್ಪೀಕರ್ ಆಡಳಿತ ಪಕ್ಷದ ಕೈಗೊಂಬೆಯಾಗಲಿದ್ದಾರಾ ? ದೇಶದ ಪರವಾಗಿ ಧ್ವನಿ ಎತ್ತುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಚರ್ಚೆಗೆ ಅವಕಾಶ ನೀಡಬೇಕು.ರಾಹುಲ್ ಗಾಂಧಿ ಅವರು ನಿರಂತರವಾಗಿ ಜನಪರ ಹೋರಾಟ ಮಾಡುತ್ತಿದ್ದಾರೆ ಎಂದು ಲೋಕಸಭೆಯ ಸ್ಪೀಕರ್ ನಡೆಯನ್ನು ಸಲೀಂ ಅಹ್ಮದ್ ಖಂಡಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನಸಭಾ ಉಪಸಭಾಧ್ಯಕ್ಷರಾದ ರುದ್ರ್ಪ ಲಮಾಣಿ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎಫ್.ಎನ್ ಗಾಜೀಗೌಡ್ರ,ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಸಂಜೀವಕುಮಾರ ನೀರಲಗಿ,ಜಿಲ್ಲಾ ವಕ್ತಾರರಾದ ಡಾ.ಸಂಜಯ ಡಾಂಗೆ,ಬಸವರಾಜ ಹೆಡಿಗೊಂಡ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 