ರಾಜ್ಯವ್ಯಾಪಿ ನಾಳೆ ಟೈಪಿಂಗ್ ಪರೀಕ್ಷೆ ಆರಂಭ
Typing test begins tomorrow across the state
ಧಾರವಾಡ 10: ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಭಾಷೆಯ ಬೆರಳಚ್ಚು(ಟೈಪಿಂಗ್) ಪರೀಕ್ಷೆಗಳು ಜ.12 ರಂದು (ಸೋಮವಾರ) ರಾಜ್ಯವ್ಯಾಪಿ ಆರಂಭಗೊಳ್ಳಲಿವೆ. ಜ.16ರಿಂದ ಇಂಗ್ಲೀಷ್ ಭಾಷೆಯ ಶೀಘ್ರಲಿಪಿ (ಶಾರ್ಟಹ್ಯಾಂಡ್) ಮತ್ತು ಜ.19ರಿಂದ ಕನ್ನಡ ಭಾಷೆಯ ಶೀಘ್ರಲಿಪಿ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ರಾಜ್ಯ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ಆದೇಶ ಹೊರಡಿಸಿ, ಎಲ್ಲಾ ಪರೀಕ್ಷೆಗಳನ್ನು ನಿಯಮಾನುಸಾರ ವ್ಯವಸ್ಥಿತವಾಗಿ ಜರುಗಿಸಲು ಸೂಚನೆ ನೀಡಿ, ಅಧಿಕೃತ ವೇಳಾಪಟ್ಟಿ ಪ್ರಕಟಿಸಿದ್ದಾರೆ. ಅಭ್ಯರ್ಥಿಗಳು ಧಾರವಾಡ ಜಿಲ್ಲೆಯ ವ್ಯಾಪ್ತಿಯ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಮತ್ತು ಶೀಘ್ರಲಿಪಿ ಪರೀಕ್ಷೆಗಳ ಸಮಗ್ರ ಮಾಹಿತಿಗಾಗಿ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಕಚೇರಿ ಅಥವಾ ನವನಗರದ ಅನ್ನಪೂರ್ಣ ಇನ್‌ಸ್ಟಿಟ್ಯೂಟ್ ಆಫ್ ಕಾಮರ್ಸ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಬಹುದು. ಜ.15 ಮಕರ ಸಂಕ್ರಾಂತಿ ಹಾಗೂ ಜ.18 ರವಿವಾರ ರಜೆ ಇರುವುದರಿಂದ ಈ ದಿನಗಳಂದು ಪರೀಕ್ಷೆಗಳು ನಡೆಯುವದಿಲ್ಲ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 