ಪುಟಿನ್ ನಿವಾಸ ಗುರಿಯಾಗಿಸಿ ಉಕ್ರೇನ್ ದಾಳಿ: ಪ್ರಧಾನಿ ಕಳವಳ
Ukraine attack targeting Putin's residence: Prime Minister concerned
ನವದೆಹಲಿ:: ಉಕ್ರೇನ್ ಸೇನೆಯು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ ಆರೋಪಿಸಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಯುದ್ದವನ್ನು ಕೊನೆಗಾಣಿಸಲು ಮತ್ತು ಶಾಂತಿಯನ್ನು ಕಾಪಾಡಲು ರಾಜತಾಂತ್ರಿಕತೆಯೇ ವಿಶ್ವಾಸಾರ್ಹ ಮಾರ್ಗವಾಗಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 'ರಷ್ಯಾದ ಅಧ್ಯಕ್ಷ ಪುಟಿನ್ ನಿವಾಸದ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದ್ದು, ನಾವು ತೀವ್ರ ಕಳವಳಗೊಂಡಿದ್ದೇವೆ. ಯುದ್ಧವನ್ನು ಅಂತ್ಯಗೊಳಿಸಲು ಮತ್ತು ಶಾಂತಿಯನ್ನು ಕಾಪಾಡಲು ರಾಜತಾಂತ್ರಿಕ ಪ್ರಯತ್ನಗಳೇ ಅತ್ಯಂತ ವಿಶ್ವಾಸಾರ್ಹ ಮಾರ್ಗವಾಗಿವೆ. ಇಂತಹ ಪ್ರಯತ್ನಗಳತ್ತ ಗಮನಹರಿಸುವಂತೆ ನಾವು ಸಂಬಂಧಪಟ್ಟ ಎಲ್ಲರನ್ನೂ ಒತ್ತಾಯಿಸುತ್ತೇವೆ' ಎಂದು ಅವರು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.
ಉಕ್ರೇನ್ ಸೇನೆಯು ಪುಟಿನ್ ಅವರ ನಿವಾಸವನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆಸಿದೆ ಎಂದು ರಷ್ಯಾ ಸೋಮವಾರ ಆರೋಪಿಸಿದೆ. ಉಕ್ರೇನ್ ಜತೆಗಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಮಾತುಕತೆಯ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ರಷ್ಯಾ ಎಚ್ಚರಿಸಿದೆ.
‘ರಷ್ಯಾದ ನೊವ್ಗೊರೊಡ್ ಪ್ರಾಂತ್ಯದಲ್ಲಿರುವ ಪುಟಿನ್ ಅವರ ಅಧಿಕೃತ ನಿವಾಸವನ್ನು ಗುರಿಯಾಗಿಸಿ ಉಕ್ರೇನ್ 91 ಡ್ರೋನ್ಗಳನ್ನು ಹಾರಿಸಿದೆ. ನಮ್ಮ ವಾಯು ರಕ್ಷಣಾ ವ್ಯವಸ್ಥೆಯು ಎಲ್ಲವನ್ನೂ ಹೊಡೆದುರುಳಿಸಿದೆ’ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ರಷ್ಯಾ ಸೇನೆಯು ಈ ದಾಳಿಗೆ ಪ್ರತೀಕಾರದ ದಾಳಿ ನಡೆಸಲು ಉಕ್ರೇನ್ನ ಕೆಲವು ತಾಣಗಳನ್ನು ಆಯ್ಕೆ ಮಾಡಿದೆ. ಅದೇ ರೀತಿ, ಸಂಧಾನ ಮಾತುಕತೆಗೆ ಸಂಬಂಧಿಸಿದಂತೆ ರಷ್ಯಾ ತನ್ನ ನಿಲುವನ್ನು ಬದಲಿಸುವ ಸಾಧ್ಯತೆಯಿದೆ’ ಎಂದು ಅವರು ಘೋಷಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 