ಕೆರೆಯಂತಾದ ರಸ್ತೆಗಳಿಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಿ: ಬಿ.ಟಿ. ಚಂದ್ರಶೇಖರ್ ಆಗ್ರಹ
Undertake development work on roads that have turned into ponds: B.T. Chandrashekhar urges
ಲಕ್ಷ್ಮೇಶ್ವರ, ಜು.28: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ರಸ್ತೆಗಳನ್ನು ತುರ್ತಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಬಿ.ಟಿ. ಚಂದ್ರಶೇಖರ್ ಆಗ್ರಹಿಸಿದರು. ಲಕ್ಷ್ಮೇಶ್ವರ ತಾಲ್ಲೂಕಿನ ಪುಟಗಾವ್ ಬಡ್ನಿ ಗ್ರಾಮದಿಂದ ಬೆಳೆಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಪರೀಶೀಲಿಸಿದ ಬಳಿಕ ಅವರು ಮಾತನಾಡಿದರು.
ಪುಟಗಾವ್ ಬಡ್ನಿ ಸಮೀಪದ ರಸ್ತೆ ಸಂಪೂರ್ಣ ಹದಗೆಟ್ಟು, ದೊಡ್ಡ ದೊಡ್ಡ ಗುಂಡಿಗಳಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಕೆರೆಯಂತಾಗಿರುವ ಕಾರಣ ಮಳೆಗಾಲದಲ್ಲಿ ಸಂಚಾರ ಇನ್ನಷ್ಟು ಅಪಾಯಕಾರಿಯಾಗಿದೆ ಎಂದು ಅವರು ತಿಳಿಸಿದರು.
ಇದು ಕೇವಲ ಒಂದು ರಸ್ತೆಯ ಸಮಸ್ಯೆಯಲ್ಲ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಅನೇಕ ರಸ್ತೆಗಳ ಸ್ಥಿತಿಯೂ ಇದೇ ರೀತಿಯಾಗಿದೆ. ಆದ್ದರಿಂದ ಕ್ಷೇತ್ರದ ಎಲ್ಲ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಗತ್ಯ ಕ್ರಮ ಕೈಗೊಂಡು ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಆರಂಭಿಸಬೇಕು. ಇಲ್ಲದಿದ್ದರೆ ರಸ್ತೆ ಬಂದ್ ಸೇರಿದಂತೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 