ಅ.16 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳ್ಳಾರಿಗೆ ಆಗಮನ
Union Finance Minister Nirmala Sitharaman to arrive in Ballari on October 16
ಅ.16 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳ್ಳಾರಿಗೆ ಆಗಮನ
ಬಳ್ಳಾರಿ 14: ಭಾರತ ಸರ್ಕಾರದ ಕೇಂದ್ರ ಹಣಕಾಸು ಮತ್ತು ಕಾರ್ೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 16 ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 01.45 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್ ನ ಗ್ರಂಥಾಲಯಕ್ಕೆ ಭೇಟಿ ನೀಡುವರು.ಬಳಿಕ ಮಧ್ಯಾಹ್ನ 03 ಗಂಟೆಗೆ ಸಿರುಗುಪ್ಪ ತಾಲ್ಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ಏರಿ್ಡಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.ನಂತರ ಸಂಜೆ 04.45 ಗಂಟೆಗೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಪ್ರಗತಿ ಪರೀಶೀಲನೆ ನಡೆಸುವರು. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.ಅ.17 ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.ಕಂಪ್ಲಿ: ಆಕ್ಷೇಪಣೆಗಳಿಗೆ ಆಹ್ವಾನಬಳ್ಳಾರಿ 14: ಕಂಪ್ಲಿ ಪಟ್ಟಣದ ಕಂಪ್ಲಿ-ಕೊಟ್ಟಾಲ್ ರಸ್ತೆಯ ರಾಘವೇಂದ್ರ ಮಠಕ್ಕೆ ಹೋಗುವ ರಸ್ತೆಯ ವೃತ್ತಕ್ಕೆ ‘ಶ್ರೀ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ’ ವೃತ್ತ ಎಂದು ಹೆಸರು ನಾಮಕರಣ ಮಾಡಲು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬಹುದು.
ಅವಧಿ ಮೀರಿ ಬಂದಂತಹ ಮನವಿ ಅಥವಾ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅ.18 ರಂದು ಒಂದು ದಿನ ಜಾಗೃತಿ ಕಾರ್ಯಾಗಾರಬಳ್ಳಾರಿ 14: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ಆರ್‌ಎಎಂಪಿ ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಅ.18 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ ಒಂದು ದಿನದ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್ ಅವರು ತಿಳಿಸಿದ್ದಾರೆ. ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಲ್ಲಿ ಹಣಕಾಸು, ತಾಂತ್ರಿಕ ಮತ್ತು ಮಾರ್ಗದರ್ಶನ ಬೆಂಬಲದ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ಇದು ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಕುರಿತು ಸೌಲಭ್ಯಗಳನ್ನು ಪ್ರದರ್ಶಿಸುತ್ತದೆ. ಯಶಸ್ಸಿನ ಕಥೆಗಳನ್ನು ಹಂಚಿಕೊಳ್ಳುತ್ತದೆ ಮತ್ತು ನೆಟ್ ವಕಿಂರ್ಗ್‌ಗಾಗಿ ತಜ್ಞರು, ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಂಪರ್ಕ ಸಾಧಿಸಲು ಅವಕಾಶಗಳನ್ನು ಒದಗಿಸಿಕೊಡುತ್ತದೆ.ಹಾಗಾಗಿ ಆಸಕ್ತ ವಿದ್ಯಾರ್ಥಿಗಳು, ಉದ್ದಿಮೆದಾರರು ಕಾರ್ಯಾಗಾರಲ್ಲಿ ಭಾಗವಹಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 