ಗುಣಮಟ್ಟದ ಸಂಶೋಧನಾ ಗ್ರಂಥಗಳ ಪ್ರಕಟಣೆಗೆ ವಿಶ್ವವಿದ್ಯಾಲಯಗಳು ಮುಂದಾಗಬೇಕು: ಪ್ರೊ. ಪಿ.ಎಲ್. ಧರ್ಮ
Universities should come forward to publish high-quality research books: Prof. P.L. Dharma
ಲೋಕದರ್ಶನ ವರದಿ
ಬಳ್ಳಾರಿ, ಸೆ. 4: ಇತ್ತೀಚಿನ ದಿನಗಳಲ್ಲಿ ಸಂಶೋಧನಾ ವಿದ್ಯಾರ್ಥಿಗಳಲ್ಲಿ ಸ್ವತಂತ್ರ ಹಾಗೂ ವಿಭಿನ್ನ ದೃಷ್ಟಿಕೋನಗಳ ಆಲೋಚನೆಗಳು ಕುಂಠಿತವಾಗುತ್ತಿವೆ. ಮಾರ್ಗದರ್ಶಕರು ನೀಡುವ ವಿಷಯವನ್ನೇ ಸಂಶೋಧನಾ ಸರಕಾಗಿ ಅಧ್ಯಯನ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಂಶೋಧನಾ ವಿದ್ಯಾರ್ಥಿಗಳಲ್ಲಿ ಸ್ವತಂತ್ರ ಚಿಂತನೆ ಮತ್ತು ಹೊಸ ಆಲೋಚನೆಗಳನ್ನು ಬೆಳೆಸುವ ಅಗತ್ಯವಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಅಭಿಪ್ರಾಯಪಟ್ಟರು.
ವಿಜಯನಗರ ವಿಶ್ವವಿದ್ಯಾಲಯದ ಆಂತರಿಕ ಗುಣಮಟ್ಟ ಕೋಶ ಹಾಗೂ ಗ್ರಂಥಾಲಯ, ಮಾಹಿತಿ ವಿಜ್ಞಾನ ವಿಭಾಗದ ಸಹಭಾಗಿತ್ವದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಎರಡು ದಿನಗಳ ‘ಸಂಶೋಧನಾ ವಿಧಾನಗಳು ಮತ್ತು ಪ್ರಕಟಣಾ ನೀತಿ ಸಂಹಿತೆಗಳು’ ಕಾರ್ಯಾಗಾರದಲ್ಲಿ ಶುಕ್ರವಾರ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಅವರು ಮಾತನಾಡಿದರು.
ಸಂಶೋಧನಾ ವಿಧಾನಗಳಲ್ಲಿ ವೈವಿಧ್ಯ ಅಗತ್ಯ
ವ್ಯಕ್ತಿಯಿಂದ ವ್ಯಕ್ತಿಗೆ ಯೋಚನಾ ಶಕ್ತಿ ವಿಭಿನ್ನವಾಗಿರುವಾಗ ಎಲ್ಲ ವಿಷಯಗಳಿಗೂ ಒಂದೇ ರೀತಿಯ ಸಂಶೋಧನಾ ವಿಧಾನಗಳನ್ನು ಹೇಗೆ ಅನ್ವಯಿಸಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಸಂಶೋಧನೆಯ ಸ್ವರೂಪಕ್ಕೆ ಅನುಗುಣವಾಗಿ ವಿಭಿನ್ನ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದರು. 2013ರಿಂದ 2023ರವರೆಗೆ ಕರ್ನಾಟಕದಲ್ಲಿ ಒಟ್ಟು 27 ಸಾವಿರ ಪಿಎಚ್.ಡಿ. ಪದವಿಗಳು ಹೊರಬಂದಿವೆ ಎಂದು ಅವರು ತಿಳಿಸಿದರು.
ಜ್ಞಾನವನ್ನು ವಿಸ್ತರಿಸುವ ಹಾಗೂ ಸಮಾಜಮುಖಿಯಾದ ಸಂಶೋಧನೆಗಳು ಇಂದು ವಿರಳವಾಗಿವೆ. ಇಂತಹ ಸಂಶೋಧನೆಗಳನ್ನು ಪುನರ್ಸ್ಥಾಪಿಸಲು ಅಂತರ್ಶಿಸ್ತೀಯ ಹಾಗೂ ಬಹುಶಿಸ್ತೀಯ ಪರಿಕಲ್ಪನೆಗಳ ಮೂಲಕ ಸಂಶೋಧನೆ ನಡೆಸುವ ಅಗತ್ಯವಿದೆ ಎಂದು ಪ್ರೊ. ಧರ್ಮ ಹೇಳಿದರು.
ಸಂಶೋಧಕರಲ್ಲಿ ಭಾಷಾ ಪಾಂಡಿತ್ಯ, ವಿಷಯ ಜ್ಞಾನ ಬೆಳೆಸಿಕೊಳ್ಳಿ
ಪ್ರತಿಯೊಬ್ಬ ಸಂಶೋಧಕರು ಭಾಷಾ ಪಾಂಡಿತ್ಯ, ವಿಷಯ ಜ್ಞಾನ ಹಾಗೂ ಆಧುನಿಕ ಕೌಶಲ್ಯಗಳನ್ನು ಕರಗತ ಮಾಡಿಕೊಂಡಿರಬೇಕು. ರಾಜ್ಯದಲ್ಲಿ ಅನಕ್ಷರತೆ ಹೋಗಲಾಡಿಸಲು ಹಾಗೂ ಸಮಾಜಕ್ಕೆ ಕೈಗನ್ನಡಿಯಾಗುವ ಗುಣಮಟ್ಟದ ಸಂಶೋಧನಾ ಗ್ರಂಥಗಳನ್ನು ಹೊರತರುವಲ್ಲಿ ವಿಶ್ವವಿದ್ಯಾಲಯಗಳು ಮುಂಚೂಣಿಯಲ್ಲಿ ಇರಬೇಕು ಎಂದು ಅವರು ಕರೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 