ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ: ಅಗತ್ಯ ದಾಖಲೆ ತರಲು ಸಾರ್ವಜನಿಕರಿಗೆ ಸೂಚನೆ
Upalokayukta's complaint acceptance program
ಕೊಪ್ಪಳ 28: ಗೌರವಾನ್ವಿತ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರ್ಪ ಅವರು ಅಕ್ಟೋಬರ್ 30 ರಂದು ಸಾರ್ವಜನಿಕರ ದೂರು ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವ ದೂರುದಾರರು ಅಥವಾ ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಲು ಸೂಚಿಸಿದೆ.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಅಕ್ಟೋಬರ್ 30 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಆದ್ದರಿಂದ ಸಾರ್ವಜನಿಕರು ಅಥವಾ ಅರ್ಜಿದಾರರು ನಿಗದಿತ ದಿನದಂದು ತಮ್ಮ ದೂರು ಅರ್ಜಿ ಹಾಗೂ ಅಗತ್ಯ ದಾಖಲೆಗಳು, ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಖುದ್ದು ಹಾಜರಾಗಿ ಉಪಲೋಕಾಯುಕ್ತರಿಗೆ ದೂರು ಸಲ್ಲಿಸಬೇಕು. ನಮೂನೆ 1 ಮತ್ತು 2 ಗಳನ್ನು ಅರ್ಜಿದಾರರಿಗೆ ಸ್ಥಳದಲ್ಲಿಯೇ ವಿತರಣೆ ಮಾಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತದ ರಾಯಚೂರು ಕಚೇರಿಯ ಪೊಲೀಸ್ ಅಧೀಕ್ಷಕರಾದ ಸತೀಶ ಎಸ್.ಚಿಟಗುಬ್ಬಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 