ಉರ್ದು ಪ್ರೌಢಶಾಲೆಯನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಿದ
Urdu High School upgraded to Maulana Azad Public School
ಹಾನಗಲ್ 19: :ತಾಲೂಕಿನ ಅಕ್ಕಿಆಲೂರಿನ ಸರಕಾರಿ ಉರ್ದು ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಯನ್ನಾಗಿ ಮೇಲ್ದರ್ಜೆಗೇರಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಭೂ ನ್ಯಾಯ ಮಂಡಳಿ ಸದಸ್ಯ ಯಾಸೀರ್‌ಅರಾಫತ್ ಮಕಾನದಾರ ಮಾತನಾಡಿ, ಕಳೆದ 3-4 ವರ್ಷಗಳಲ್ಲಿ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಕಾಣಲಾಗಿದೆ. ಅಕ್ಕಿಆಲೂರಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆರಂಭಿಸಬೇಕು ಎನ್ನುವ ಬೇಡಿಕೆ ಹತ್ತಾರು ವರ್ಷಗಳಿಂದ ಕೇಳಿ ಬರುತ್ತಿತ್ತು. ಇದೀಗ ಶಾಲೆ ಮೇಲ್ದರ್ಜೆಗೇರಿರುವುದರಿಂದ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಉರ್ದು ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಸಿಗಲಿದೆ. ಶಾಸಕ ಶ್ರೀನಿವಾಸ ಮಾನೆ ಅವರ ಪ್ರಯತ್ನದ ಫಲದಿಂದ ಸುತ್ತಲಿನ ಹತ್ತು, ಹಲವು ಗ್ರಾಮಗಳ ಸಹಸ್ರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಅಂಜುಮನ್ ಅಧ್ಯಕ್ಷ ಮೆಹಬೂಬ ಬ್ಯಾಡಗಿ ಮಾತನಾಡಿ ತಾಲೂಕಿನಲ್ಲಿ ಸಮುದಾಯ ಮತ್ತು ಶಾಸಕರ ಸಹಭಾಗಿತ್ವದ 50ಅ:50ಅ ಯೋಜನೆ ರಾಜ್ಯದ ಗಮನ ಸೆಳೆದಿದೆ. ಸಮುದಾಯ ವಂತಿಗೆ ರೂಪದಲ್ಲಿ ಸೇರಿಸುವ ಹಣಕ್ಕೆ ಸಮನಾಗಿ ಶಾಸಕ ಶ್ರೀನಿವಾಸ ಮಾನೆ ಅವರು ವೈಯಕ್ತಿಕ ಹಣ ನೀಡಿ ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುತ್ತಿರುವುದು ಮಾದರಿ ಯೋಜನೆ ಎಂದರು. ಗ್ರಾಪಂ ಅಧ್ಯಕ್ಷ ಮಕ್ಬೂಲ್‌ಅಹ್ಮದ್ ರುಸ್ತುಂಖಾನವರ, ಎಸ್‌ಡಿಎಂಸಿ ಅಧ್ಯಕ್ಷ ಸಾಧಿಕ್ ಹಸನಬಾದಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಸತ್ತಾರಸಾಬ ಅರಳೇಶ್ವರ, ಖ್ವಾಜಾಮೊಹಿದ್ದೀನ್ ಅಣ್ಣಿಗೇರಿ, ಭರಮಣ್ಣ ಶಿವೂರ, ಗೀತಾ ಪೂಜಾರ, ರಜಿಯಾ ಹಿತ್ತಲಮನಿ, ನಸರುಲ್ಲಾ ಶಿರಹಟ್ಟಿ, ಇನಾಯತ್ ಪಠಾಣ, ಮಹಾಂತೇಶ ಮಲಗುಂದ, ಅಬ್ದುಲ್‌ಕರೀಂ ಹಿತ್ತಲಮನಿ, ಇಂದೂಧರ ಸಾಲಿಮಠ, ಅಮೀರಸಾಬ ನೆಲವಿಗಿ, ಅಲ್ತಾಫ್ ಶಿರಹಟ್ಟಿ, ಹಿದಾಯತ್ ಮಿಠಾಯಿಗಾರ ಸೇರಿದಂತೆ ಗ್ರಾಪಂ ಮತ್ತು ಎಸ್‌ಡಿಎಂಸಿ ಸದಸ್ಯರು, ಪಾಲಕರು, ಶಿಕ್ಷಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 