ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದ ಜ್ವಲಂತ ಸಮಸ್ಯೆಗಳಿಗೆ ತುರ್ತು ಪರಿಹಾರ ಅಗತ್ಯ: ಪ್ರೊ.ಬಿ.ಡಿ.ಕುಂಬಾರ
Urgent solutions are needed to the burning issues of library and information science: Prof. B.D. Ku
ವಿಜಯಪುರ 05: ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದ ಜ್ವಲಂತ ಸಮಸ್ಯೆಗಳ ಬಗೆಗೆ ಸಂಶೋಧಕರು, ಶಿಕ್ಷಕರು ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ. ಇಲ್ಲದಿದ್ದರೆ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗಗಳು ಮುಚ್ಚುವ ಪರಿಸ್ಥಿತಿ ಬರಬಹುದು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಹಾಗೂ ಇಂಡಿಯನ್ ಅಸೋಸಿಯೇಷನ್ ಆಫ್ ಸ್ಪೆಷಲ್ ಲೈಬ್ರರೀಸ್ ಅಂಡ್ ಇನ್ಫರ್ಮೇಶನ್ ಸೆಂಟರ್ಸ್ ಇವರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಯಾಸ್ಲಿಕ್ ಪ್ರಾಯೋಜಿತ “ಗ್ರಂಥಾಲಯ ದೃಷ್ಟಿಕೋನ- 2047” ಎಂಬ ವಿಷಯದ ಕುರಿತ 34ನೇ ಅಖಿಲ ಭಾರತ ಸಮ್ಮೇಳನ 2025 ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಭವಿಷ್ಯದ ಗ್ರಂಥಾಲಯಗಳು ಡಿಜಿಟಲ್ ಜ್ಞಾನವನ್ನು ಒದಗಿಸಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳ ಸವಾಂರ್ಗೀಣ ಬೆಳವಣಿಗೆಗೆ ಮಹತ್ವದ ಸಹಕಾರ ದೊರೆಯುತ್ತದೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಇನ್‌ಫ್ಲಿಬ್‌ನೆಟ್ ಕೇಂದ್ರದ ನಿರ್ದೇಶಕಿ ಪ್ರೊ.ದೇವಿಕಾ ಮಾಡಳ್ಳಿ ದಿಕ್ಸೂಚಿ ಭಾಷಣ ನೀಡಿ, ಇನ್‌ಫ್ಲಿನೆಟ್ ಉಚಿತವಾಗಿ ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದ್ದು, ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಸಂಶೋಧಕರು, ವಿದ್ಯಾರ್ಥಿನಿಯರು ಈ ಸೌಲಭ್ಯಗಳನ್ನು ಸದುಪಯೋಗ ಪಡೆಸಿಕೊಳ್ಳಬೇಕೆಂದರು.
ಬೀದರ್ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಮಾತನಾಡಿ, ಐಎಎಸ್‌ಎಲ್‌ಐಸಿ ಯ "ಗ್ರಂಥಾಲಯ ದೃಷ್ಟಿಹಿ2047" ಭಾರತವನ್ನು ಜ್ಞಾನಾಧಾರಿತ, ಆತ್ಮನಿರ್ಭರ ಮತ್ತು ಹೊಸ ರಾಷ್ಟ್ರವನ್ನಾಗಿ ರೂಪಿಸುವ ದಿಕ್ಕಿನಲ್ಲಿ ಸಾಗುವ ಮಾರ್ಗಸೂಚಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದೊರೆಸ್ವಾಮಿ ಎಂ. ಮಾತನಾಡಿ, ಗ್ರಂಥಾಲಯಗಳು ಕೇವಲ ಪುಸ್ತಕಗಳ ಸಂಗ್ರಹಾಲಯಗಳಾಗಿರದೆ, ಡಿಜಿಟಲ್ ಜ್ಞಾನ, ಸಂಶೋಧನೆ, ನವೀನತೆ ಮತ್ತು ಸಮಾಜ ಪರಿವರ್ತನೆಯ ಶಕ್ತಿಕೇಂದ್ರಗಳಾಗಬೇಕು ಎಂಬುದು ನಮ್ಮ ದೃಷ್ಟಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಮಾತನಾಡಿ, ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿನಿಯರು ಗ್ರಂಥಾಲಯದ ಡಿಜಿಟಲೀಕರಣ ಕುರಿತು ಸಮಗ್ರ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದು ಹೇಳಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ ಡಿಜಿಟಲ್ ಗ್ರಂಥಾಲಯಗಳು ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದು, ಅಧ್ಯಯನ ಮತ್ತು ಸಂಶೋಧನೆಗೆ ಅಗತ್ಯವಾದ ಪುಸ್ತಕಗಳು, ಇಹಿಜರ್ನಲ್‌ಗಳು, ಸಂಶೋಧನಾ ಪ್ರಬಂಧಗಳು ಮತ್ತು ಇತರೆ ಮಾಹಿತಿಗಳು ಸುಲಭವಾಗಿ ಲಭ್ಯವಾಗುತ್ತಿವೆ. ಡಿಜಿಟಲ್ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯಿಂದ ಜ್ಞಾನಾರ್ಜನೆ ವೇಗಗೊಳ್ಳುವ ಜೊತೆಗೆ ಶೈಕ್ಷಣಿಕ ಗುಣಮಟ್ಟವೂ ಹೆಚ್ಚಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಸಂಶೋಧನಾ ಪ್ರಬಂಧಗಳ ಸಂಕಲನವನ್ನು ಗಣ್ಯರು ಬಿಡುಗಡೆ ಮಾಡಿದರು
ಕಾರ್ಯಕ್ರಮದಲ್ಲಿ ಪ್ರೊ.ಸಿ.ಆರ್.ಕರಿಸಿದ್ಧಪ್ಪ, ಪ್ರೊ.ಎ.ವೈ.ಆಸುಂಡಿ, ಪ್ರೊ. ಪಿ.ವಿ.ಕೊಣ್ಣೂರು, ಪ್ರೊ.ಸಂಪತ್ ಕುಮಾರ, ಪ್ರೊ.ಸಂತೋಷ ಕುಮಾರ, ಪ್ರೊ.ಶ್ರೀನಿವಾಸ ರಾಘವನ್, ಪ್ರೊ.ಕೆ.ಪಿ.ವಿಜಯಕುಮಾರ, ಪ್ರೊ.ಎಂ.ಚಂದ್ರಶೇಖರ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಸವರಾಜ.ಎಲ್.ಲಕ್ಕಣ್ಣವರ, ಅಯಾಸ್ಲಿಕ್ ಅಧ್ಯಕ್ಷ ಪ್ರೊ.ನರೇಂದ್ರ ಲಹ್ಕರ, ಪ್ರೊ.ಕೇಶವ್, ಪ್ರೊ.ಪಿ.ಆರ್.ಗೋಸ್ವಾಮಿ, ಪ್ರೊ.ರಾಧಾಕೃಷ್ಣ, ಪಶ್ಚಿಮ ಬಂಗಾಳ, ಉತ್ತರ್ರದೇಶ, ಛತ್ತೀಸ್‌ಗಡ, ಈಶಾನ್ಯ ರಾಜ್ಯಗಳು ಸೇರಿದಂತೆ ವಿವಿಧ ರಾಜ್ಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದ ತಜ್ಞರು, ಸಂಶೋಧಕರು ಹಾಗೂ ವೃತ್ತಿಪರರು, ಸಿಂಡಿಕೇಟ್ ಮತ್ತು ಅಕಾಡೆಮಿಕ್ ಸದಸ್ಯರು, ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಹಾಗೂ ಬೋಧಕ,ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಡಿದರು. ಕಾರ್ಯದರ್ಶಿ ಪ್ರೊ.ಪಿ.ಜಿ.ತಡಸದ ಸ್ವಾಗತಿಸಿದರು. ಸಹ ಕಾರ್ಯದರ್ಶಿ ಪ್ರೊ.ಗವಿಸಿದ್ದಪ್ಪ ಎ ಅತಿಥಿಯರನ್ನು ಪರಿಚಯಿಸಿದರು. ಅಯಾಸ್ಲಿಕ್ ಕಾರ್ಯದರ್ಶಿ ಅಭಿಜಿತ ಕುಮಾರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಶೋಧನಾ ವಿದ್ಯಾರ್ಥಿನಿ ಪ್ರಗತಿ ನಂದುರ ನಿರೂಪಿಸಿದರು. ಪ್ರೊ. ಶಾಂತಾದೇವಿ ಟಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 