ನೀರನ್ನು ಅವಶ್ಯಕತೆ ಇದ್ದಷ್ಟು ಬಳಕೆ ಮಾಡಿ: ಹಂಜಿ
Use as much water as you need: Hanji
ನೀರನ್ನು ಅವಶ್ಯಕತೆ ಇದ್ದಷ್ಟು ಬಳಕೆ ಮಾಡಿ: ಹಂಜಿ
ಯರಗಟ್ಟಿ 31: ನಮಗೆ ಪ್ರಕೃತಿ ನೀಡುವ ಗಾಳಿ, ಬೆಳಕು, ನೀರನ್ನು ನಾವು ಅವಶ್ಯಕತೆ ಇದ್ದಷ್ಟು ಬಳಕೆ ಮಾಡಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ನೀಡಬೇಕು ಎಂದು ದೈಹಿಕ ಶಿಕ್ಷಕ ಎಸ್.ಎಂ.ಹಂಜಿ ಹೇಳಿದರು.
ಸಮೀಪದ ತಲ್ಲೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬುದವಾರ ಇಕೋ ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪರಿಸರ ಸಂರಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನೆಗೊಂದು ಗಿಡ, ಉರಿಗೊಂದು ವನ ನೆಡಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳ ಪರಿಸರದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಅಶ್ವಿನಿ ನಾಯ್ಕರ, ದ್ವಿತೀಯ ತನುಶ್ರೀ ಮರಿಗೌಡರ, ತೃತೀಯ ಅನುಷ್ಕಾ ಕಾಜಗಾರ ಪಡೆದು ಕೊಂಡರು. ಅವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಇದಕ್ಕೂ ಮುಂಚೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪರಿಸರ ಜಾಗೃತಿ ಜಾಥಾ ಜರುಗಿತು.
ಮುಖ್ಯ ಶಿಕ್ಷಕ ಡಿ.ಡಿ.ಭೋವಿ, ಎಸ್.ಎಂ.ಮಾಳೈನವರ, ಎಸ್.ಎಫ್.ಮುರಗನ್ನವರ, ಎಂ.ಎ.ಬಸರಿಮರದ, ವಿಜಯಲಕ್ಷ್ಮೀ ಕಳಸನ್ನವರ, ಆರ್.ಎಚ್.ಅತ್ತಾರ, ಅಶ್ವಿನಿ ಹಿರೇಮಠ, ಪ್ರೀತಿ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 