ವೈಕುಂಠ ಏಕಾದಶಿ ಉತ್ಸವ
ಕೊಪ್ಪಳ 07: ನಗರದ ಕೋಟೆ ಹತ್ತಿರರುವ ವೆಂಕಟೇಶ್ವರ ದೇವಸ್ಥಾನದಲ್ಲಿ ಜ. 10 ರಂದು ಶುಕ್ರವಾರ ವೈಕುಂಠ ಏಕಾದಶಿ ಉತ್ಸವ ಆಚರಿಸಲಾಗುತ್ತದೆ. ಅಂದು ದೇವಸ್ಥಾನದಲ್ಲಿ ವೈಕುಂಠ ದ್ವಾರವನ್ನು ನಿರ್ಮಿಸಿ, ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ಮಾಡಲಾಗುವದು.
ಅಂದು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪುನೀತರಾಗಬೇಕು ಎಂದು ದೇವಸ್ಥಾನದ ಟ್ರಸ್ಟ್ ಅಧ್ಯಕ್ಷರಾದ ವಿನಾಯಕ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.