ಕೆಂಪವಾಡದಲ್ಲಿ ವಾಜಿಪೇಯ ಅವರ 101ನೇ ಜನ್ಮದಿನಾಚರಣೆ
Vajpayee's 101st birthday celebration in Kempevada
ಕಾಗವಾಡ, 05 : ತಾಲೂಕಿನ ಕೆಂಪವಾಡದ ಕಚೇರಿಯಲ್ಲಿ ಬುಧವಾರ ದಿ. 25 ರಂದು ಕೋಟ್ಯಂತರ ಕಾರ್ಯಕರ್ತರ ಮಾರ್ಗದರ್ಶಕರು, ಅಜಾತ ಶತ್ರು, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮದಿನ ದಂದು ಬಿಜೆಪಿ ಕಾಗವಾಡ ಮಂಡಲದ ವತಿಯಿಂದ ಮಾಜಿ ಸಚಿವರು ಹಾಗೂ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಅಧ್ಯಕ್ಷರಾದ ಶ್ರೀಮಂತ ಪಾಟೀಲ ಅವರು ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನಗಳನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣಕ್ಕೆ ತಮ್ಮ ಜೀವನವನ್ನೇ ಅರ್ಿಸಿದ ವಾಜಪೇಯಿ ಅವರ ಆದರ್ಶಗಳು, ದೃಢ ನಾಯಕತ್ವ ಹಾಗೂ ದೇಶಭಕ್ತಿಯ ಚಿಂತನೆಗಳು ನಮ್ಮೆಲ್ಲರಿಗೂ ಸದಾ ಪ್ರೇರಣೆಯಾಗಿ ಉಳಿಯುತ್ತವೆ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನ (ಉತ್ತಮ ಆಡಳಿತ ದಿನ)ವನ್ನಾಗಿ ಆಚರಿಸಲಾಗುತ್ತದೆ ಎಂದರು.
ಈ ಸಮಯದಲ್ಲಿ ಬಿಜೆಪಿ ಪಕ್ಷದ ಯುವ ನಾಯಕರು ಹಾಗೂ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸ ಪಾಟೀಲ ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಖಾನೆಯ ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 