ವಾಜಪೇಯಿ ಅಪರೂಪದ ಜನನಾಯಕ : ಮಾಜಿ ಶಾಸಕ ಸಾಸನೂರ
Vajpayee is a rare populist : Former MLA Sasanur
ದೇವರಹಿಪ್ಪರಗಿ 27: ಭಾರತರತ್ನ, ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಾಮಾಣಿಕತೆ, ನಿಷ್ಠಾವಂತ ನಾಯಕತ್ವ, ದೇಶದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿದ್ದು, ಸುವರ್ಣ ಚತುಷ್ಪಥ ಯೋಜನೆ, ಗ್ರಾಮೀಣ ರಸ್ತೆ ಅಭಿವೃದ್ಧಿ ಹಾಗೂ ಪಕ್ಷಾತೀತವಾಗಿ ಅಜಾತಶತ್ರು ಗುಣಗಳಿಂದ ದೇಶದ ರಾಜಕಾರಣದಲ್ಲಿ ಅಪರೂಪದ ಜನನಾಯಕ ಸ್ಥಾನ ಪಡೆದವರು ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.ಪಟ್ಟಣದಲ್ಲಿ ಶನಿವಾರದಂದು ಸುಶಾಸನ ದಿನಾಚರಣೆ ಪ್ರಯುಕ್ತ ಸಸಿ ನೆಡುವುದು ಹಾಗೂ ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಪೂರ್ವಭಾವಿ ಸಭೆ ನೇತೃತ್ವ ವಹಿಸಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಯುವ ಜನತೆ ದೇಶ ನಿರ್ಮಾಣದಲ್ಲಿ ಕೈಜೋಡಿಸಬೇಕು.
ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಂಡಲದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗಿಯಾಗಬೇಕು. ಮತಕ್ಷೇತ್ರ ದೊಡ್ಡದಾದ ಕಾರಣ ದೇವರಹಿಪ್ಪರಗಿ ಹಾಗೂ ಹೂವಿನ ಹಿಪ್ಪರಗಿ ಎರಡು ಮಂಡಲ ರಚನೆಗೆ ರಾಜ್ಯಾಧ್ಯಕ್ಷರನ್ನು ಹಾಗೂ ಜಿಲ್ಲಾಧ್ಯಕ್ಷರನ್ನು ಮನವರಿಕೆ ಮಾಡಿದ್ದೇನೆ. ಪಕ್ಷ ಸಂಘಟನೆಗೆ ಉತ್ಸಾಹಿ ಯುವಕರನ್ನು ಪಕ್ಷ ಗುರುತಿಸುತ್ತದೆ. ಬರುವಂತ ದಿನಗಳಲ್ಲಿ ಜಿಪಂ, ತಾಪಂ ಚುನಾವಣೆ ಹತ್ತಿರ ಬರುತ್ತಿದ್ದು ಬಿಜೆಪಿ ಸರ್ಕಾರದಲ್ಲಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡ ಕೆಲಸಗಳ ಬಗ್ಗೆ ಜನರಿಗೆ ಮುಟ್ಟಿಸುವ ಮೂಲಕ ಪಕ್ಷದ ಸಂಘಟನೆಗೆ ಮುಖಂಡರು, ಕಾರ್ಯಕರ್ತರು ಕೈಜೋಡಿಸಬೇಕು ಎಂದು ಹೇಳಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಪ.ಪಂ ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ ಅವರು ಮಾತನಾಡಿ,ಅಟಲ್ ಜೀ ಅವರ 101ನೇ ಜನ್ಮದಿನವನ್ನು ದೇಶದೆಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದೇವೆ. ವಾಜಪೇಯಿ ಅವರು ತೋರಿದ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕಿದೆ,
ಪ್ರತಿಯೊಬ್ಬರು ವಾಜಪೇಯಿ ಅವರ ಬದುಕನ್ನು ಅಧ್ಯಯನ ಮಾಡಬೇಕು,ತಮ್ಮ ಸಾರ್ವಜನಿಕ ಜೀವನದಲ್ಲಿ ಎಂದೂ ಕಪ್ಪುಚುಕ್ಕೆ ಬರದಂತೆ ಬದುಕಿದವರು, ಎಂತಹ ಕಠಿಣ ಪರಿಸ್ಥಿತಿಯಲ್ಲೂ ತಾವು ನಂಬಿದ ತತ್ವ ಸಿದ್ದಾಂತಗಳಿಗೆ ರಾಜೀಯಾಗದೆ ಎಲ್ಲವನ್ನೂ ಮೆಟ್ಟಿ ನಿಂತು ಕೊನೆಗೆ ಈ ದೇಶದ ಪ್ರಧಾನಿಯಾಗಿ ನಮ್ಮೆಲ್ಲರಿಗೂ ಆದರ್ಶ ಪ್ರಾಯರಾದವರು ಎಂದು ಹೇಳಿದರು.ಬಿಜೆಪಿ ಮಂಡಲ ಅಧ್ಯಕ್ಷರಾದ ಅವ್ವಣ ಗ್ವಾತಗಿ ಅವರು ಮಾತನಾಡಿ,ಮಂಡಲ ಪದಾಧಿಕಾರಿಗಳು ಸಭೆಗೆ ಗೈರು ಹಾಜರಾಗದೆ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ ದೊಡ್ಡಮನಿ, ಮಹಾಂತೇಶ ಬಿರಾದಾರ, ಕೋಶಾಧ್ಯಕ್ಷರಾದ ಸೋಮಶೇಖರ ಹಿರೇಮಠ, ಮುಖಂಡರುಗಳಾದ ಗುರುನಾಥ ಮುರಡಿ, ಭೀಮನಗೌಡ ಲಚ್ಯಾಣ, ಶ್ರೀಮಂತ ತಳವಾರ,ದಾವುದ್ ಇನಾಮದಾರ, ನಿಂಗನಗೌಡ, ಶರಣು ದಳವಾಯಿ, ಸೋಮು ದೇವೂರ, ಕಲ್ಮೇಶ ಬುದ್ನಿ, ಸುಧಾಕರ ಅಡಕಿ,ಆಕಾಶ ಕಬ್ಬಿನ,ವಿನೋದ ಚವ್ಹಾಣ ಸೇರಿದಂತೆ ಮಂಡಲದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 