ಸರ್ಕಾರಿ ವೈದ್ಯಕೀಯ ಕಾಲೇಜ ಹೊರಾಟಗಾರರ ಬೇಷರತ್ ಬಿಡುಗಡೆಗೆ ವಿವಿಧ ಸಂಘಟನೆಗಳ ಆಗ್ರಹ
Various organizations demand unconditional release of government medical college protestors
ದೇವರಹಿಪ್ಪರಗಿ: ವಿಜಯಪುರ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಗಾರರನ್ನು ಬಂಧಿಸಿ, ಜೈಲಿಗೆ ಹಾಕಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಹಮ್ಮಿಕೊಂಡಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನ ಹೋರಾಟ ಸಮಿತಿ, ಜನ ವೇದಿಕೆ ಮತ್ತು ವಿವಿಧ ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ನಿಂಗಣ್ಣ ಬಿರಾದಾರ ಅವರಿಗೆ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.
ಮುಂಚೆ ಕರವೇ ತಾಲೂಕು ಘಟಕದ ಅಧ್ಯಕ್ಷರಾದ ರಹೀಮಾನ್ ಕನಕಲ್ ಅವರು ಮಾತನಾಡಿ,ಹೋರಾಟಗಾರರ ಮೇಲೆ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು, ಹೋರಾಟಗಾರರಿಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ವಿರೋಧಿಗಳಿಂದ ಪ್ರಾಣ ಬೆದರಿಕೆ ಇದ್ದು, ಕೂಡಲೇ ಸೂಕ್ತ ರಕ್ಷಣೆ ಒದಗಿಸಬೇಕು. ಹೋರಾಟಗಾರರಿಗೆ ಪ್ರಾಣ ಬೆದರಿಕೆಗೆ ಇದೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳನ್ನು ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.ಸ್ವ ಸಹಾಯ ಸಂಘದ ಸಿಸ್ಟರ್ ಹೃದಯ ಅವರು ಮಾತನಾಡಿ,ಹುಣಶ್ಯಾಳದ ಸಂಗನಬಸವ ಸ್ವಾಮೀಜಿ ಸೇರಿದಂತೆ ಎಲ್ಲ ಹೋರಾಟಗಾರರ ಮೇಲೆ ದೌರ್ಜನ್ಯ ಎಸಗಿದ ಪೊಲೀಸರ ನಡೆ ಖಂಡನೀಯ ಕೂಡಲೇ ಬಂಧಿಸಿರುವ ಹೋರಾಟಗಾರರನ್ನು ಬೇಷರತ್ತು ಬಿಡುಗಡೆಮಾಡಬೇಕು ಎಂದು ಆಗ್ರಹಿಸಿದರು .
ರಾಷ್ಟ್ರೀಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರೇಣುಕಾ ಪಾಟೀಲ ಅವರು ಮಾತನಾಡಿ, ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಒತ್ತಾಯಿಸಿ ನೂರಾರು ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ ದೂರು ದಾಖಲೆಸಿರುವುದು ಖಂಡನಿಯ, ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಆಗ್ರಹಿಸಿದರು.ಇದೇ ಸಂದರ್ಭದಲ್ಲಿ ಸ್ವಸಹಾಯ ಸಂಘದ ಮಹಿಳಾ ಮುಖಂಡೆ ಶಾಂತಾ ದೇಗಿನಾಳ,ಜೈನಾಬಿ ಮರೋಳ,ಜೈನಾಬಿ ಮೊಮೀನ, ಕರೆಪ್ಪ ಹೊಸಮನಿ, ಹಸನಸಾಬ ಬಾಗವಾನ, ದೀಲಿಪ ದೋಡಮನಿ, ಹಸನಸಾಬ ನದಾಫ್, ಅಶೋಕ ಗೊಲ್ಲರ, ಸುರೇಶ ಕೊಕಟನೂರ, ಪಿಂಟೊ ಬಾಸುತ್ಕರ, ಕರೆಪ್ಪ ಹೊಸಮನಿ, ಜಂಬಣ್ಣ ದುರಗಮುರಗಿ, ಸುರೇಶ ಕೋಕಠನೂರ, ಬೌರಮ್ಮ ಸೇರಿದಂತೆ ಜನವೇದಿಕೆ, ಸ್ವಸಹಾಯ ಸಂಘ, ಕರ್ನಾಟಕ ಜನಸೇವೆ ಕರವೇ ತಾಲೂಕು ಪದಾಧಿಕಾರಿಗಳ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಫೋಟೋ 5ಜಠಿ2
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 