ಮಾಜಿ ಸಿಎಂ ಬೊಮ್ಮಾಯಿ ಜನ್ಮ ದಿನಾಚರಣೆ ಅಂಗವಾಗಿ ವಿವಿಧ ಸಾಮಾಜಿಕ ಕಾರ್ಯಕ್ರಮ
Various social programs on the occasion of former CM Bommai's birth anniversary
ಶಿಗ್ಗಾವಿ 27 : ಪಟ್ಟಣದ ಸವಣೂರ ರಸ್ತೆಯಲ್ಲಿರುವ ಬಸವರಾಜ ಬೊಮ್ಮಾಯಿ ಅವರ ಸ್ವಗೃಹ ಸಭಾಭವನದಲ್ಲಿ ಮಾಜಿ ಸಿಎಂ,ಸಂಸದ ಬಸವರಾಜ ಬೊಮ್ಮಾಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಜ.28 ರಂದು ಅವರ ಅಭಿಮಾನಿ ಬಳಗ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಅಂದು ಬೆಳಗ್ಗೆ ಕಾರ್ಯಕರ್ತ, ಅಭಿಮಾನಿಗಳಿಂದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ವಿವಿಧೆಡೆ ಹಾಲು, ಹಣ್ಣು ವಿತರಿಸಲಾಗುತ್ತದೆ. ನಂತರ ಹುಬ್ಬಳ್ಳಿ ಎಂ.ಎಂ.ಜೋಶಿ ಸಂಸ್ಥೆಯಿಂದ ನೇತ್ರ ಚಿಕಿತ್ಸೆ, ಹೃದಯ ಚಿಕಿತ್ಸೆ ರಕ್ತದಾನ ಶಿಬಿರ ಬೆಳಿಗ್ಗೆಯಿಂದ ಸಂಜೆವರೆಗೆ ನಡೆಯಲಿದೆ. ಬಳಿಕ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಸಮಾರಂಭದಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಮುಖಂಡ ಬೊಮ್ಮಾಯಿ ಸೇರಿದಂತೆ ಗಣ್ಯರು ಆಗಮಿಸಲಿದ್ದಾರೆ. ಅಭಿಮಾನಿಗಳು, ಶಿಗ್ಗಾವಿ, ಸವಣೂರ ತಾಲೂಕಿನ ಬಿಜೆಪಿ ವಿವಿಧ ಘಟಕದ ಪದಾಧಿಕಾರಿಗಳು, ಕಾರ್ಯ ಕರ್ತರು ಆಗಮಿಸಬೇಕು ಎಂದು ಮುಖಂಡ ಗಂಗಾಧರ ಸಾತಣ್ಣವರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 