ರಾಯಬಾಗ ನವ ದೆಹಲಿಯ ಭಾರತ ಮಂಟಪಂ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯಿಂದ ಗುರುವಾರ ಆಯೋಜಿಸಿದ್ದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಬಾಗ ತಾಲೂಕಿನ ದಿಗ್ಗೆವಾಡಿ ಗ್ರಾಮದ ವೇದಮೂರ್ತಿ ಡಾ.ಕಾಡಯ್ಯಾ ಹಿರೇಮಠ ಅವರಿಗೆ ರಾಷ್ಟ್ರಮಟ್ಟದ ಧರ್ಮ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀಗಳು, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಯಡಿಯೂರು ಸಿದ್ದಲಿಂಗ ಸ್ವಾಮೀಜಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ವಿ.ಸೋಮಣ್ಣ, ಲೋಕಸಭೆ ಸದಸ್ಯರಾದ ಬಿ.ವೈ.ರಾಘವೇಂದ್ರ, ಜಗದೀಶ ಶೆಟ್ಟರ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕನವಾಡಿ ಸೇರಿ ಅನೇಕರು ಇದ್ದರು.