ಆ.8ರಿಂದ ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ
Veerabhadreshwara Deva Jatraramahotsava from August 8th in Betageri
ಆ.8ರಿಂದ ಬೆಟಗೇರಿ ವೀರಭದ್ರೇಶ್ವರ ದೇವರ ಜಾತ್ರಾಮಹೋತ್ಸವ
ಬೆಟಗೇರಿ 06: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಹಾಗೂ ಶ್ರಾವಣ ಮಾಸದ ಪ್ರಯುಕ್ತ ಆಗಷ್ಟ 8 ಮತ್ತು 9ರಂದು ಇಲ್ಲಿಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ.
ಆ.8ರಂದು ಇಲ್ಲಿಯ ಶ್ರೀ ವೀರಭದ್ರೇಶ್ವರ ದೇವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ಗುಗೆ ಪೂಜೆ, ನೈವೇದ್ಯ ಸಮರೆ್ನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ರಾತ್ರಿ 8 ಗಂಟೆಗೆ ಜೀ ಕನ್ನಡ ಸರಿಗಮಪ ಖ್ಯಾತಿಯ ಶ್ರೀಮತಿ ಸುಜಾತಾ ಕಲ್ಮೇಶ ಹಾಗೂ ತಂಡದವರಿಂದ ಸುಗಮ ಸಂಗೀತ, ವಿವಿಧ ಭಜನಾ ತಂಡದವರಿಂದ ಭಜನೆ, ಜಾಗರಣೆ ಕಾರ್ಯಕ್ರಮ ನಡೆಯಲಿದೆ.
ಆ.9ರಂದು ಬೆಳಗ್ಗೆ 6ಗಂಟೆಗೆ ಸ್ಥಳೀಯ ವೀರಭದ್ರೇಶ್ವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಮುಂಜಾನೆ 8ಗಂಟೆಗೆ ಆರತಿ, ಕರಡಿ ಮಜಲು, ವಾದ್ಯಮೇಳದೊಂದಿಗೆ ಪುರವಂತರಿಂದ ವೀರಭದ್ರೇಶ್ವರ ದೇವರ ಒಡಪು ಹೇಳುವ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರೇಶ್ವರ ದೇವರ ಮತ್ತು ಭದ್ರಕಾಳಿ ಮಾತೆಯ ಮೂರ್ತಿಗಳ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ, ನೈವೇದ್ಯ ಸಮರೆ್ನ, ಮಹಾಪ್ರಸಾದ, ಶ್ರೀಗಳಿಗೆ, ದಾನಿಗಳಿಗೆ, ಗಣ್ಯರಿಗೆ ಸತ್ಕಾರ ಸಮಾರಂಭ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಗೋಕಾಕ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ ದಿವ್ಯ ಸಾನಿಧ್ಯ, ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಸತ್ತಿಗೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಸಮ್ಮುಖ, ಸಂಗಯ್ಯ ಹಿರೇಮಠ, ಈರಯ್ಯ ಹಿರೇಮಠ ಜಾತ್ರಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದಾರೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಗಣ್ಯರು, ರಾಜಕೀಯ ಮುಖಂಡರು, ಪುರವಂತರು, ವಿವಿಧ ಸಂಘ-ಸಂಸ್ಥೆಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ವೀರಭದ್ರೇಶ್ವರ ದೇವರ ಭಕ್ತರು, ಸ್ಥಳೀಯರು ಉಪಸ್ಥಿತರಿರುವರು ಎಂದು ಜಾತ್ರಾ ಮಹೋತ್ಸವ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 