ವೀರಭದ್ರೇಶ್ವರ ದೇವಸ್ಥಾನ ರಥೋತ್ಸವಕ್ಕೆ ಶ್ರೀಗಳಿಂದ ಚಾಲನೆ
Veerabhadreshwara Temple Chariot Festival inaugurated by the Venerable
ಶಿಗ್ಗಾವಿ 03 : ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ದವನದ ಹುಣ್ಣಿಮೆಯ ಅಂಗವಾಗಿ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಜರುಗಿದವು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಕ್ತರ ಜಯಘೋಷಗಳ ನಡುವೆ ಶ್ರೀ ವೀರಭದ್ರೇಶ್ವರ ರಥೋತ್ಸವಕ್ಕೆ ಶ್ರೀಗಳಾದ ಗಂಜೀಗಟ್ಟಿ ವೈಜನಾಥ ಶಿವಾಚಾರ್ಯ ಮಹಾಸ್ವಾಮಿಗಳು, ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು , ಗೋಟಗೋಡಿಕೊಪ್ಪ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು ಹಾಗೂ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಕ್ಷೇತ್ರ ಹಿರೇಮನವಳ್ಳಿ ಪಾವನ ಸಾನಿಧ್ಯದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ವೇ.ಮೂ. ಮಲ್ಲಿಕಾರ್ಜುನ ಹಿರೇಮಠ ಇವರಿಂದ ವೈದಿಕ ಸೇವೆಗಳು ನೆರವೇರಿದವು. ಈ ಧಾರ್ಮಿಕ ಕಾರ್ಯಕ್ರಮದಲ್ಲಿಮಾಜಿ ಸಂಸದ ಮಂಜುನಾಥ ಕುನ್ನೂರ, ಶಿವಾನಂದ ಮ್ಯಾಗೇರಿ, ರಮೇಶ ವನಹಳ್ಳಿ, ಶಂಕರಗೌಡ ಪಾಟೀಲ, ಈರಣ್ಣ ಬಡ್ಡಿ, ಮಾಲತೇಶ ಹಾವಣಗಿ, ಶಿವಪ್ಪ ಗಂಜಿಗಟ್ಟಿ, ನವೀನ ಹಾವನೂರ, ಮುತ್ತು ಯಲಿಗಾರ, ಶಂಕ್ರ್ಪ ಕಡಕೋಳ, ಅಶೋಕ ದುದಗಿ, ವಸಂತ ಬಡ್ಡಿ, ಭರಮಜ್ಜ ನವಲಗುಂದ, ಮಾಲತೇಶ ಯಲಿಗಾರ, ಶಂಕ್ರ್ಪ ಅರಳೇಶ್ವರ, ತಮ್ಮಣ್ಣಾ ಬನ್ನಿಕೊಪ್ಪ, ಸುರೇಶ ಯಲಿಗಾರ, ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಸದ್ಭಕ್ತರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 