ನಾಳೆ ಮಕ್ಕಳ ಸಂತೆ ಮೇಳ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕ್ಕೆ ವೆಂಕಟೇಶ್ ಬಾರಕೆರ್‌ಯಿಂದ ಚಾಲನೆ
Venkatesh Baraker to inaugurate Children's Fair and Science Exhibition tomorrow
ಕೊಪ್ಪಳ 08: ನಗರದ ಬಹದ್ದೂರ್ ಬಂಡಿ ರಸ್ತೆ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮಿಲ್ಲತ್ ಪಬ್ಲಿಕ್ ಶಾಲಾ ಅವರಣದಲ್ಲಿ ದಿನಾಂಕ 10 ರ ಬುಧವಾರ ಬೆಳಿಗ್ಗೆ ಶಾಲಾ ಮಕ್ಕಳಿಂದ ಸಂತೆಮೇಳ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಜರುಗಲಿದೆ, ಕೊಪ್ಪಳದ ಹಿರಿಯ ಸಮಾಜ ಸೇವಕ ಹಾಗೂ ಲ್ಯಾಂಡ್ ಡೆವಲೋಪರ್ ಗಿಣಿಗೇರಿಯ ವೆಂಕಟೇಶ್ ಬಾರ್ಕೆರ್ ರವರು ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ, ನಗರಸಭೆಯ ಅಧ್ಯಕ್ಷ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಅಮ್ಜದ್ ಪಟೇಲ್ ರವರು ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು ಸಂಸ್ಥೆಯ ಅಧ್ಯಕ್ಷ ಸಯ್ಯದ್ ಗೌಸ್ ಪಾಷಾ ಖಾಜಿ ರವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಶಫೀಕ್ ಅಹಮದ್ ದಾಗದಾರ ,ಅಂಜುಮನ್ ಕಮಿಟಿಯ ಅಧ್ಯಕ್ಷ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಎಂ ಡಿ ಆಸಿಫ್ ಕರ್ಕಿಹಳ್ಳಿ, ನಗರ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸಂಸ್ಥೆಯ ನಿರ್ದೇಶಕ ಎಂ ಪಾಷಾ ಕಾಟನ್, ನಗರ ಆಶ್ರಯ ಕಮಿಟಿ ಮಾಜಿ ಸದಸ್ಯ ಹಾಗೂ ಸಂಸ್ಥೆಯ ನಿರ್ದೇಶಕ ಎಂ ,ಡಿ ,ಜಹಿರ ಅಲಿ ಮತ್ತು ಹಿರಿಯ ಪತ್ರಕರ್ತ ಹಾಗೂ ಸಂಸ್ಥೆಯ ನಿರ್ದೇಶಕ ಎಂ ಸಾಧಿಕ್ ಅಲಿ ಸೇರಿದಂತೆ ನಿರ್ದೇಶಕರುಗಳಾದ ಸೈಯದ್ ನಜೀರ್ ಅಹಮದ್ ಅತ್ತಾರ್, ದಾವುದ ಹುನಗುಂದ್, ರೇಷ್ಮಾ ಅಲ್ಲಾಭಕ್ಷ್ ಇಲಿಯಾಳ, ಮತ್ತು ಶಾಲೆಯ ಕಾರ್ಯನಿರ್ವಾಹಕ ಸಂಚಾಲಕರುಗಳಾದ ಅಬ್ದುಲ್ ಅಜೀಜ ಮಾನ್ವಿ ಕರ್ ಮತ್ತು ಸೈಯದ್ ಇಮಾಮ ಹುಸೇನ್ ಸಿಂದೋಗಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ್ ರೇವಡಿ ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 