ನಾಳೆ ವೆಂಕಟೇಶ್ವರ ಜಾತ್ರಾ ಮಹೋತ್ಸವ

ನಾಳೆ ವೆಂಕಟೇಶ್ವರ ಜಾತ್ರಾ ಮಹೋತ್ಸವ Venkateswara Jatra festival tomorrow

  ದೇವರಹಿಪ್ಪರಗಿ 04: ತಾಲೂಕಿನ ಮಣೂರ ಗ್ರಾಮದ ಹತ್ತಿರ ಇರುವ ವೆಂಕಟೇಶ್ವರ ದೇವರ ಜಾತ್ರೆ, ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ. ಡಿ.6 ಶನಿವಾರ ಬೆಳಗ್ಗೆ 10 ಗಂಟೆಗೆ ಜಾತ್ರಾ ಮಹೋತ್ಸವದ ಪ್ರಯುಕ್ತ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ ಎಂದು ವೆಂಕಟೇಶ್ವರ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷರಾದ ಎಲ್‌.ಆರ್‌.ಅಂಗಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಹಿರೇಮಠದ ಮರುಳಾರಾಧ್ಯ ಶಿವಾಚಾರ್ಯರು ವಹಿಸಲಿದ್ದಾರೆ. ಸಾನಿಧ್ಯವನ್ನು ತಿಂಥಣಿಯ ವೀರಗೋಟದ ಅಡವಿ ಲಿಂಗ ಮಹಾರಾಜರರು. ನಿಂಬಾಳದ ಗುರುದೇವ ತಪೋವನ ಆಶ್ರಮದ ಪ.ಪೂ ತೇಜೋಮಯಾನಂದ ಮಹಾಸ್ವಾಮಿಗಳು, ತಾಳಿಕೋಟೆಯ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹಾಗೂ  ಕೆಸರಟ್ಟಿಯ ಪ.ಪೂ ಬಾಲತಪಸ್ವಿ ಸೋಮಲಿಂಗ ಮಹಾಸ್ವಾಮೀಜಿಗಳು ವಹಿಸಲಿದ್ದಾರೆ.   

ಅಧ್ಯಕ್ಷತೆಯನ್ನು ಮಣೂರ ಗ್ರಾಮದ ವೆಂಕಟೇಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಎಲ್‌.ಆರ್‌.ಅಂಗಡಿ ವಹಿಸಲಿದ್ದು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ,ಮಾಜಿ ಶಾಸಕರಾದ ರಮೇಶ ಭೂಸನೂರ, ಜಿಲ್ಲಾಧಿಕಾರಿ ಡಾ. ಆನಂದ.ಕೆ, ಎಸ್ ಪಿ ಲಕ್ಷ್ಮಣ್ಣ  ನಿಂಬಾಳ್ಕರ್, ಧಾರವಾಡ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಈಶ್ವರ್ ಉಳ್ಳಾಗಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಚಂದ್ರಶೇಖರ ಕವಟಗಿ ವಹಿಸಲಿದ್ದು. ಅದ್ದೂರಿ ಜಾತ್ರಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಗ್ರಾಮದ ಭಕ್ತಾದಿಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಈ ಮೂಲಕ ತಿಳಿಸಿದ್ದಾರೆ. ಮುಖಂಡರಾದ ಎಸ್‌.ಎನ್‌.ಬಸವರಡ್ಡಿ, ಪಿ.ಕೆ.ನಾಯಕ ಹಾಗೂ ಸೇವಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.