ನವದೆಹಲಿ, ಡಿ 2- ದೇಶದ ಉದ್ದಗಲಕ್ಕೂ ಭಾರಿ ಸಂಚಲನ ಮೂಡಿಸಿರುವ ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರ ಮತ್ತು ಬರ್ಬರ ಕೊಲೆ ಪ್ರಕರಣ ಲೋಕಸಭೆಯಲ್ಲಿ ಸೋಮವಾರ ಮಾರ್ದನಿಸಿತು.
ಬಹಳಷ್ಟು ಸದಸ್ಯರು ಈ ವಿಚಾರ ಗಂಭೀರವಾಗಿದೆ, ಈ ವಿಚಾರ ಚರ್ಚೆಯಾಗಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು. ಈ ನಡುವೆ ಸದನ, ಸದಸ್ಯಪಶುವೈದ್ಯೆ ಕೊಲೆ – ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ರಾಜನಾಥ್ ಸಿಂಗ್ ರ ಭಾವನೆಗಳಿಗೆ ಕೂಡಲೇ ಸ್ಪಂದಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಭಾನುವಾರವಷ್ಟೇ ತೆಲಂಗಾಣ ಸರ್ಕಾರ ಈ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡುವುದಾಗಿ ಹೇಳಿತ್ತು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಅವರಿಗೆ ತೆಲಂಗಾಣದ ರಾಜ್ಯಪಾಲರು ಪತ್ರ ಬರೆದು ಒತ್ತಾಯ ಮಾಡಿದ್ದಾರೆ.