ಜಿಲ್ಲಾ ಯುವ ಕಾಂಗ್ರೆಸ್‌ಗೆ ವಿಜಯ ಚವ್ಹಾಣ ಆಯ್ಕೆ

Vijaya Chavan elected to District Youth Congress

ಜಿಲ್ಲಾ ಯುವ ಕಾಂಗ್ರೆಸ್‌ಗೆ ವಿಜಯ ಚವ್ಹಾಣ ಆಯ್ಕೆ  

ದೇವರಹಿಪ್ಪರಗಿ 08: ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚುನಾವಣೆಯ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಚಿದಾನಂದ ಚವ್ಹಾಣ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ತಾಲೂಕಿನ ಕೋರವಾರ ಗ್ರಾಮದ ಯುವ ಮುಖಂಡರಾಗಿ, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸುಭಾಸ ಛಾಯಗೋಳ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಡಾ ಪ್ರಭುಗೌಡ ಲಿಂಗದಳ್ಳಿ (ಚಬನೂರ) ಹಾಗೂ ಗ್ರಾಮದ ಪಿಕೆಪಿಎಸ್ ಅಧ್ಯಕ್ಷರಾದ ಸಂಗಮೇಶ ಛಾಯಗೋಳ ಅವರ ಮಾರ್ಗದರ್ಶನದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಆನ್ಲೈನ್ ಮುಖಾಂತರ ನಡೆದ ಚುನಾವಣೆಯಲ್ಲಿ ಸುಮಾರು 1484 ಮತಗಳನ್ನು ಪಡೆಯುವ ಮೂಲಕ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗೆಲುವು ಸಾಧಿಸಿದ್ದಾರೆ.