ರೈತರ ದಿನಾಚರಣೆ-2025 ಅಂಗವಾಗಿ ವಿಜಯನಗರ ಜಿಲ್ಲಾ 3ನೇ ವರ್ಷದ ರೈತರ ಸಮಾವೇಶ
Vijayanagar District 3rd Annual Farmers' Conference as part of Farmers' Day-2025
ಹೊಸಪೇಟೆ 30: ಇಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಾಸುದೇವ ಮೇಟಿ ಬಣದಿಂದ ರೈತರ ದಿನಾಚರಣೆ-2025 ಅಂಗವಾಗಿ ವಿಜಯನಗರ ಜಿಲ್ಲಾ 3ನೇ ವರ್ಷದ ರೈತರ ಸಮಾವೇಶ ಹಮ್ಮಿಕೊಳ್ಳಲಾಯಿತು. ರೈತರ ನೇಗಿಲು ಪೂಜೆ ಸಲ್ಲಿಸಿ ನಗರದ ವಡಕರಾಯ ದೇವಸ್ಥಾನದಿಂದ ಮುಖ್ಯಬೀದಿ, ಮೇನ್ ಬಜಾರ್ - ಪಾದಗಟ್ಟೆ ಆಂಜನೇಯ ದೇವಸ್ಥಾನ ದರ್ಗಾಮಸೀದಿ - ಅಂಬೇಡ್ಕರ್ ವೃತ, ಕಾಲೇಜ್ ರಸ್ತೆ ಮುಖಾಂತರ 101 ಕಳಸಗಳನ್ನು ಯುವತಿಯರು ಹೊತ್ತುಕೊಂಡು ಮೆರವಣಿಗೆಯಲ್ಲಿ ಸಾಗಿದರು. 21 ಜೋಡಿ ಎತ್ತಿನ ಬಂಡಿ, ಡೊಳ್ಳು, ಕೋಲಾಟ, ಭಜನೆ, ವಿವಿಧ ಕಲಾ ಸಾಂಸ್ಕೃತಿಕ ಜಾನಪದ ತಂಡದ ಜೊತೆಗೆ ಉತ್ಸವದ ರೀತಿಯಲ್ಲಿ ಅತ್ಯಂತ ಉಲ್ಲಾಸದ ಸಂಭ್ರಮಾಚರಣೆಯೊಂದಿಗೆ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ತಲುಪಿದರು.
ಈ ಸಂದರ್ಭದಲ್ಲಿ ರೈತ ಗೀತೆ ಹಾಡುವಾಗ ರೈತರು ಸಂಭ್ರಮದಿಂದ ಸಿಳ್ಳೆ ಕೇಕೆಗಳನ್ನು ಹಾಕಿ ಕುಣಿದು ಕುಪ್ಪಳಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್ ಏನ್ ಮೊಹಮ್ಮದ್ ಇಮಾಮ ನಿಯಾಜಿ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವಾಸುದೇವ ಮೇಟಿ ಬಣದಿಂದ ರೈತರ ದಿನಾಚರಣೆ-2025 ಅಂಗವಾಗಿ ವಿಜಯನಗರ ಜಿಲ್ಲಾ 3ನೇ ವರ್ಷದ ರೈತರ ಸಮಾವೇಶವನ್ನು ಹಮ್ಮಿಕೊಳ್ಳುವುದರ ಮೂಲಕ ದೇಶದ ಪ್ರತಿಯೊಬ್ಬ ರೈತರಿಗೂ ಗೌರವ ಸೂಚಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿರುತ್ತದೆ.
ಈ ಒಂದು ರೈತರ ದಿನಾಚರಣೆ ಕಾರ್ಯಕ್ರಮಕ್ಕೆ ಹಗಲಿರುಳು ಶ್ರಮಿಸಿ ಕಾರ್ಯಕ್ರಮದ ಯಶಸ್ಸಿಗೆ ಪ್ರತ್ಯಕ್ಷವಾಗಿ ಹಾಗು ಪರೋಕ್ಷವಾಗಿ ಕಾರಣರಾಗಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ತಿಳಿಸಿದರು.ದೇಶದಲ್ಲಿ ಪ್ರತಿವರ್ಷ ಡಿಸೆಂಬರ್ 23ನ್ನು ರಾಷ್ಟ್ರೀಯ ರೈತರ ದಿನ ಅಥವಾ ಕಿಸಾನ್ ದಿವಸ ಎಂದು ಆಚರಿಸಲಾಗುತ್ತದೆ. ಭಾರತದ ಬೆನ್ನುಲುಬು ರೈತರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಭಾರತ ಕೃಷಿ ಪ್ರಧಾನ ದೇಶವಾಗಿರುವುದರಿಂದ ಇಲ್ಲಿ ರೈತರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನಾವು ತಿನ್ನುವ ದವಸ ಧಾನ್ಯಗಳು, ಹಣ್ಣು, ತರಕಾರಿ, ಹೈನುಗಾರಿಕಾ ಉತ್ಪನ್ನಗಳನ್ನೆಲ್ಲ ಉತ್ಪಾದಿಸುವುದು ಈ ರೈತರೆ. ಅನಾದಿ ಕಾಲದಿಂದಲೂ ನಮ್ಮ ದೇಶವನ್ನು ಮುನ್ನಡೆಸಿದ್ದು ಈ ರೈತರೇ ಎಂಬುದು ತುಂಬಾ ಹೆಗ್ಗಳಿಕೆಯ ವಿಷಯ. ಹಾಗು ರೈತರಿಗೆ ಬೆಂಬಲ ಬೆಲೆ ಹೋರಾಟಕ್ಕಾಗಲೀ ಇತರೆ ಇನ್ಯಾವುದೇ ಹೋರಾಟಕ್ಕಾಗಲೀ ಸದಾ ನಿಮ್ಮೊಂದಿಗೆ ಇರುತ್ತೇನೆಂದರು.
ಕಾಂಗ್ರೆಸ್ ಪಕ್ಷದ ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದ ಸರ್ಕಾರದಲ್ಲಿ ರೈತರಿಗೆ ಬಹಳಷ್ಟು ಯೋಜನೆಗಳನ್ನು ರೂಪಿಸಿದ್ದೇವೆ ಆ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.ಪೂಜ್ಯ ಶ್ರೀ ಗಳು ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು.ಈ ಒಂದು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷರಾದ ವಾಸುದೇವ ಮೇಟಿ ಹಾಗೂ ಜಿಲ್ಲಾಧ್ಯಕ್ಷರಾದ ಸಿ.ಎ ಗಾಳೆಪ್ಪ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ. ಎಲ್. ರಾಣಿ ಸಂಯುಕ್ತ ಹಾಗೂ ವಸಂತಕುಮಾರ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸುದೇವ ಮೇಟಿ ಬಣದ ರಾಜ್ಯ ಹಾಗು ಜಿಲ್ಲಾ ಹಾಗು ತಾಲ್ಲೂಕು ಮಟ್ಟದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸಾವಿರಾರು ರೈತ ಮಹಿಳೆಯರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 