ವಿಜಯಪುರ 27: ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಇಂದು ದೇವರಹಿಪ್ಪರಗಿ ಗೋಶಾಲೆಗೆ ಭೇಟಿ ನೀಡಿ ಜಾನುವಾರುಗಳಿಗೆ ಕಲ್ಪಿಸಲಾಗುತ್ತಿರುವ ಮೇವಿನ ಸೌಲಭ್ಯ ಹಾಗೂ ಕುಡಿಯುವ ನೀರು ಹಾಗೂ ಇತರೆ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ರೈತರಿಂದ ಅಹವಾಲುಗಳನ್ನು ಸಹ ಸ್ವೀಕಾರ ಮಾಡಿದರು. ಗೋಶಾಲೆಗಳಲ್ಲಿ ಕಲ್ಪಿಸುತ್ತಿರುವ ಸೌಲಭ್ಯಗಳ ಕುರಿತು ತೃಪ್ತಿ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಸಲಹೆ ನೀಡಿದರು.