ಲೋಕದರ್ಶನ ವರದಿ
ವಿಜಯಪುರ 19: ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸಿದ್ಧೇಶ್ವರ ದೇವಾಲಯದಿಂದ ನೂರಾರು ವಿದ್ಯಾಥರ್ಿಗಳು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿಯ ರಾಷ್ಟ್ರೀಯ ಕಾರ್ಯಕಾರಣೆ ಸದಸ್ಯ ಪೃಥ್ವಿಕುಮಾರ ಮಾತನಾಡಿ, ಶಿಕ್ಷಣ ಸರ್ವರಿಗೂ ಸಿಗಬೆಕಾಗಿರುವ ಅಮೂಲ್ಯ ಸಂಪತ್ತು ಎಂಬ ಶ್ರೇಷ್ಠ ಕಲ್ಪನೆ ನಮ್ಮದು. ಜಾತಿ, ಮತ, ಬಡವ ಮತ್ತು ಶ್ರಿಮಂತನೆನ್ನದೆ ಎಲ್ಲರಿಗೂ ಸಿಗುವಂತೆ ಮಾಡುವ ಹೊಣೆಗಾರಿಕೆ ಸಕರ್ಾರಗಳದ್ದು, ರಾಜ್ಯದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ನೀಡುವುದಾಗಿ ಘೋಷಣೆ ಮಾಡಿದರೂ ಇದುವರೆಗೂ ಬಸ್ ಪಾಸ್ ನೀಡಿಲ್ಲ. 2018-19ನೇ ಸಾಲಿನ ಬಜೆಟ್ನಲ್ಲಿ ರಾಜ್ಯ ಸರ್ಕಾರ ಎಸ್.ಸಿ/ಎಸ್.ಟಿ. ಸೇರಿದಂತೆ, ಉಳಿದ ವರ್ಗಗಳಿಗೂ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಇವತ್ತಿನವರೆಗೂ ಆ ಯೋಜನೆ ಜಾರಿಗೆ ಬಾರದಿರುವುದು ವಿದ್ಯಾರ್ಥಿಗಳ ಬಗೆಗಿನ ರಾಜ್ಯ ಸರ್ಕಾರದ ನಿರ್ಲಕ್ಷ್ಯತೆ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.
ಇಂತಹ ದಿನಗಳಲ್ಲಿ ಹೆಚ್ಚಾಗಿ ಬಸ್ ಪಾಸ್ ಪಡೆಯುತ್ತಿರುವ ವಿದ್ಯಾರ್ಥಿಗಳು ಗ್ರಾಮಿಣ ಪ್ರದೇಶದವರೇ ಆಗಿದ್ದು, ರಾಜ್ಯದಲ್ಲಿನ ಎಲ್ಲಾ ವರ್ಗದ, ಎಲ್ಲಾ ಸ್ತರದ ಬಡ ಮತ್ತು ಪ್ರತಿಭಾವಂತ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕೆಂದು ಒತ್ತಾಯಿಸಿದರು.
ಹಳ್ಳಿಗಳಿಂದ ತಾಲ್ಲೂಕು-ಪಟ್ಟಣಗಳಿಗೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವಿತರಿಸುವುದರಿಂದ ಶಿಕ್ಷಣಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಕಳೆದ ವರ್ಷವು ಹಣವಿಲ್ಲವೆಂಬ ನೆಪವೊಡ್ಡಿದ ಕರ್ನಾಟಕದ ರಾಜ್ಯ ಸಕರ್ಾರ ಈ ವರ್ಷವು ಕೂಡ ವಿದ್ಯಾಥರ್ಿಗಳ ಬೇಡಿಕೆಯನ್ನು ಮೂಲೆಗುಂಪು ಮಾಡಿದೆ. ಕೇವಲ ಅಧಿಕಾರ ಉಳಿಸಿಕೊಳ್ಳುವ ಯೋಜನೆಯಲ್ಲಿರುವ ರಾಜ್ಯ ಸಕರ್ಾರಕ್ಕೆ ವಿದ್ಯಾರ್ಥಿಗಳ ಕೂಗು ಕೇಳಿಸಬೇಕು. ಹಾಗೂ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಗರ ಕಾರ್ಯದರ್ಶಿ ಸಚಿನ ಬಾಗೇವಾಡಿ, ಪಾಂಡು ಮೊರೆ, ಮಣೆಕಂಠ ಹೀರೆಮಠ, ಶ್ರೀಧರ ಕಡಕೋಳ, ಅಮರ ಕಂಬಾರ, ವಿಠ್ಠಲ ಹಾಲಳ್ಳಿ, ಸೋಮನಾಥ ತೋಳನೂರ, ನಿರಂಜನ ಮಾಶ್ಯಾಳ ಸೇರಿದಂತೆ ನೂರಾರು ವಿದ್ಯಾಥಿಗಳು ಪಾಲ್ಗೊಂಡಿದ್ದರು.