ವಿಜಯಪುರ: ಗ್ರಾಮಗಳ ರಸ್ತೆ ದುರಸ್ತಿ-ನಿರ್ವಹಣೆ ಕುರಿತಂತೆ ಪರಿಶೀಲಿಸಿ ವರದಿ ಸಲ್ಲಿಕೆಗೆ ಸೂಚನೆ

ವಿಜಯಪುರ 08: ಜಿಲ್ಲೆಯಲ್ಲಿ ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ  ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಆದ್ಯತೆ ಮೇಲೆ ಗ್ರಾಮಗಳಿಗೆ ನೀರು ಪೂರೈಸುವಂತೆ  ಜಿಲ್ಲಾ ಪಂಚಾಯತ್ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು 14ನೇ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಭೇಟಿ ನೀಡಿ ಆದ್ಯತೆ ಮೇಲೆ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ನೀರು ಪೂರೈಸಬೇಕು. ವಿವಿಧ ಗ್ರಾಮಗಳಲ್ಲಿ ಸ್ಥಾಪಿಸಲಾದ ಮೇವು ಬ್ಯಾಂಕ್ಗಳಲ್ಲಿ ಗುಣಮಟ್ಟದ ಮೇವು ಇರುವ ಜೊತೆಗೆ ಜಿಲ್ಲಾ ಪಂಚಾಯತ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.  

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಅವರು ಮಾತನಾಡಿ, ರಾಜ್ಯ ಸರ್ಕಾರವು  ಮಾನ್ಯ ಮುಖ್ಯಮಂತ್ರಿಗಳ ಸುಮಾರ್ಗ ಯೋಜನೆ ಮೂಲಕ ಗ್ರಾಮಾಂತರ ಪ್ರದೇಶದ ರಸ್ತೆಗಳ ದುರಸ್ತಿ ಹಾಗೂ ನಿರ್ವಹಣೆಗೆ ಯೋಜನೆ ರೂಪಿಸುತ್ತಿದ್ದು, ವಿಜಯಪುರ ಜಿಲ್ಲೆಗೆ ಸಂಬಂಧಪಟ್ಟಂತೆ ವಿವಿಧ ರಸ್ತೆಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿ  ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮಾನ್ಯ ಮುಖ್ಯಮಂತ್ರಿಗಳ ಗ್ರಾಮೀಣ ಸುಮಾರ್ಗ ಯೋಜನೆ ರಾಜ್ಯ ಸಕರ್ಾರ ಜಾರಿಗೆ ತರಲು ಉದ್ದೇಶಿಸಿದ್ದು, ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಸೇರಿದಂತೆ ಸುಮಾರು 5 ಸಾವಿರ ಕಿ.ಮೀ. ವ್ಯಾಪ್ತಿಯ ರಸ್ತೆಗಳ ಮರು ನಿಮರ್ಾಣಕ್ಕೆ ಸಹಕಾರಿಯಾಗಲಿದ್ದು, ಈ ಕುರಿತಂತೆ ಸೂಕ್ತ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗ ಹಾಗೂ ಪಿಎಂಜಿಎಸ್ವೈ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ಯೋಜನೆಯಡಿ ವಿವಿಧ ರಸ್ತೆಗಳ ದುರಸ್ತಿ ಹಾಗೂ ನಿರ್ವಹಣೆಗೆ ಸಂಬಂಧಪಟ್ಟಂತೆ ಹಾಗೂ ವಿವಿಧ ಗ್ರಾಮಗಳಿಂದ ಶಾಲೆಗಳಿಗೆ ಗ್ರಾಮ ಪಂಚಾಯತ್ಗಳಿಗೆ, ಆಸ್ಪತ್ರೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕುರಿತಂತೆ ಅಂಕಿ-ಅಂಶಗಳ ಆಧಾರದ ಮೇಲೆ ಹಾಗೂ ರಾಜ್ಯ ಸಕರ್ಾರದ ಸರ್ವೇ  ಆಧಾರದ ಮೇಲೆ ಹಾಗೂ ಆದ್ಯತೆ ಮೇಲೆ  ಅನುದಾನ ಲಭ್ಯವಾಗಲಿದ್ದು, ಜಿಲ್ಲೆಯ ಎಲ್ಲ ವಿಧಾನಸಭಾವಾರು ವಿವಿಧ ಗ್ರಾಮಗಳ ರಸ್ತೆಗಳನ್ನು ಯಾವ ರೀತಿಯಲ್ಲಿ ನಿರ್ವಹಣೆ ಮಾಡಬೇಕೆಂಬ ಬಗ್ಗೆ ಪರಿಶೀಲಿಸಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಸಮಿತಿಯಲ್ಲಿಯೂ ಗಮನಕ್ಕೆ ತಂದು ಜಿಲ್ಲಾ ಮಟ್ಟದ ವರದಿಯೊಂದನ್ನು ಸಿದ್ಧಪಡಿಸಿ ಸಲ್ಲಿಸಬೇಕು. ಇದರ ಆಧಾರದ ಮೇಲೆ ವಿವಿಧ ರಸ್ತೆಗಳ ನಿರ್ವಹಣೆಗೆ ರಾಜ್ಯ ಸಕರ್ಾರದಿಂದಲೇ ನೆರವು ದೊರೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ವಿವಿಧ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಗೆ ಸಂಬಂಧಪಟ್ಟಂತೆ ತಾಲೂಕಾವಾರು ಪ್ಯಾಕೇಜ್ ಆಧಾರದ ಮೇಲೆ ಏಜೆನ್ಸಿ ಮೂಲಕ ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ಮೂಲ ಸೌಕರ್ಯಾಭಿವೃದ್ದಿ ನಿಗಮ, ಗ್ರಾಮೀಣ ನೀರು ಸರಬರಾಜು ಇಲಾಖೆ ಹಾಗೂ ವಿವಿಧ ಶಾಸಕರು ಮತ್ತು ಜನಪ್ರತಿನಿಧಿಗಳ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು, ಇವುಗಳ ದುರಸ್ತಿಗೆ ವಿಶೇಷ ಆದ್ಯತೆ ನೀಡುವ ಉದ್ದೇಶದೊಂದಿಗೆ ಪ್ರತಿಯೊಂದು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಏಜೆನ್ಸಿಗಳಿಗೆ ಒಪ್ಪಿಸಿ ಅವುಗಳ ಮೂಲಕ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದೆಂದು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ತಕ್ಷಣಕ್ಕೆ ಬೊರವೆಲ್ಗಳನ್ನು ಕೊರೆಯಿಸದೇ ಆದ್ಯತೆ ಮೇಲೆ ಖಾಸಗಿ ಮಾಲೀಕತ್ವದ ಬೊರವೆಲ್ಗಳ ಮೂಲಕ ನೀರು ಪೂರೈಸಲು ಪ್ರಯತ್ನಿಸಲಾಗುತ್ತಿದೆ. ಅವಶ್ಯಕತೆ ಇದ್ದಲ್ಲಿ ಭೂಗರ್ಭ ಶಾಸ್ತ್ರಜ್ಞರ ಸಲಹೆ ಮೇರೆಗೆ ಬೊರವೆಲ್ ಕೊರೆಯಿಸಲು ಪ್ರಯತ್ನಿಸಲಾಗುವುದು. ಇದಾದರೂ ಕೂಡ ನೀರು ಸೌಲಭ್ಯವಾಗದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಸಭೆಗೆ ತಿಳಿಸಿದರು. 

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ಸೌಲಭ್ಯ ದೊರಕಿಸಲು ಪ್ರತಿ ಗ್ರಾಮ ಪಂಚಾಯತ್ ಹಾಗೂ ಹೋಬಳಿವಾರು ಅಧಿಕಾರಿಗಳನ್ನು ನೇಮಿಸಿ ರೈತರ ಹೆಸರು ನೊಂದಣಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಶೇಕಡಾ 90ರಷ್ಟು ಅರ್ಜಿ  ಸಹ ಸ್ವೀಕರಿಸಲಾಗಿದೆ. 3.62 ಲಕ್ಷ ರೈತರ ಪೈಕಿ 2.45 ಲಕ್ಷ ರೈತರು ಹೆಸರು ನೋಂದಾಯಿಸಿಕೊಂಡಿದ್ದು, ಆನ್ಲೈನ್ ಮೂಲಕ ಅಪಲೋಡ್ ಸಹ ಮಾಡಲಾಗಿದೆ ಎಂದು ಅವರು ತಿಳಿಸಿದರು. 

ಜಿಲ್ಲೆಯಲ್ಲಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಸಮನಾದ ಆಹಾರ ಧಾನ್ಯಗಳ ವಿತರಣೆ ಮತ್ತು ನಿರ್ವಹಣೆಗೆ ಸಂಬಂಧಪಟ್ಟಂತೆ ಪಾರದರ್ಶಕತೆ ಕಾಯ್ದುಕೊಳ್ಳಲು ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳ್ಳುವ ಅವಶ್ಯಕತೆ ಇದ್ದು, ಈ ಕುರಿತಂತೆ ಸಂಬಂಧಪಟ್ಟ ಸಚಿವರ ಗಮನಕ್ಕೂ ಸಹ ತರಲಾಗಿದೆ ಎಂದು ಅವರು ಹೇಳಿದರು. 

ಅದರಂತೆ ಜಿಲ್ಲೆಯಲ್ಲಿ ವೈದ್ಯರು ಮತ್ತು ಪಶು ವೈದ್ಯರನ್ನು ಯಾವುದೇ ಸಂದರ್ಭದಲ್ಲಿ ಬೇರೆ ಕಡೆಗೆ ನಿಯೋಜನೆ ಮೇಲೆ ನೇಮಕ ಮಾಡಲಾಗುತ್ತಿಲ್ಲ ಎಂದು ಹೇಳಿದರು.

ಜಿಲ್ಲಾ ಪಂಚಾಯತಿ ಕಾರ್ಯಕ್ರಮಗಳ ವಾಷರ್ಿಕ ಕ್ರೀಯಾ ಯೋಜನೆ : 2019-20ನೇ ಸಾಲಿನ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳ ವಾಷರ್ಿಕ ಕ್ರೀಯಾ ಯೋಜನೆ ಸಿದ್ಧಪಡಿಸಲಾಗಿದ್ದು, ವಿವಿಧ ಕಾರ್ಯಕ್ರಮಗಳಡಿಯಲ್ಲಿ ಒಟ್ಟು 435.41 ಕೋಟಿ ರೂ.ಗಳ ಅನುದಾನ ನಿಗದಿಪಡಿಸಲಾಗಿದೆ. 

ಫಲಾನುಭವಿ ಕಾರ್ಯಕ್ರಮಗಳಿಗಾಗಿ 3.99 ಕೋಟಿ ರೂ., ಸಂಬಳಕ್ಕಾಗಿ 148.91 ಕೋಟಿ ರೂ. ಕಾಮಗಾರಿ ಕಾರ್ಯಕ್ರಮಗಳಿಗಾಗಿ 16.46 ಕೋಟಿ ರೂ., ಇತರೆ ಕಾರ್ಯಕ್ರಮಗಳಿಗಾಗಿ 266.04 ಕೋಟಿ ರೂ.ಸೇರಿದಂತೆ ಒಟ್ಟು 435.41 ಕೋಟಿ ರೂ.ಗಳ ಅನುದಾನ  ನಿಗದಿಪಡಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು. 

ಇಂದು ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೊಡಬಾಗಿ, ಕೃಷಿ ಹಾಗೂ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಕವಿತಾ ರಾಠೋಡ, ಸಾಮಾಜಿಕ ಹಾಗೂ ನ್ಯಾಯ ಸಮಿತಿ ಅಧ್ಯಕ್ಷ ಜಯಸಿಂಗ್ ನಾಯಕ ಸೇರಿದಂತೆ ವಿವಿಧ ಜಿಲ್ಲಾ ಪಂಚಾಯತ್ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.