ಲೋಕದರ್ಶನ ವರದಿ
ವಿಜಯಪುರ 20: ಜಿಲ್ಲೆಯಲ್ಲಿ ಇದೇ ಜೂನ್. 21 ರಿಂದ 28ರವರೆಗೆ ಜರುಗುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದೇ ಅತ್ಯಂತ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದ ಜರುಗಿದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜೂನ್.21 ರಿಂದ 28ರವರೆಗೆ ಜಿಲ್ಲೆಯಲ್ಲಿ ಜರುಗುವ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳಲ್ಲಿ ನಕಲುದಂತಹ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ-ಸಿಬ್ಬಂದಿಗಳು ಹೊರತುಪಡಿಸಿ ಬೇರೆಯವರು ಪರೀಕ್ಷಾ ಕೇಂದ್ರ ಪ್ರವೇಶಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಳೆದ ಭಾರಿ ಕೆಲವು ಪರೀಕ್ಷಾ ಕೇಂದ್ರದಲ್ಲಿ ಅವ್ಯವಹಾರಗಳು ನಡೆದಿದ್ದು ಈ ಭಾರಿ ಆ ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಕೇಂದ್ರಗಳೆಂದು ಪರಿಗಣಿಸಿ ಪೊಲೀಸ್ ಸಿಬ್ಬಂದಿ ನಿಯೋಜನೆ.ಸಿಸಿ ಕ್ಯಾಮರ ಅಳವಡಿಕೆ ಒಳಗೊಂಡಂತೆ ಸೂಕ್ತ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ತಿಳಿಸಿದರು. ಉಪನಿದರ್ೇಶಕ ಪ್ರಸನ್ನ ಕುಮಾರ್ ಮಾತನಾಡಿ ಮುಂಬರುವ ಎಸ್.ಎಸ್.ಎಲ್ ಸಿ. ಪೂರಕ ಪರೀಕ್ಷೆಗೆ ಕಳೆದಭಾರಿಗಿಂತ ಪೂರ್ವಯೋಜಿತ ವ್ಯವಸ್ಥಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು ಈ ಭಾರಿ ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 23 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ, ಒಟ್ಟು 8126 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಗಳನ್ನು ಅಳವಡಿಸಿದ್ದು ಪರೀಕ್ಷಾ ಕೊಠಡಿಯ ಮೇಲ್ವಿಚಾರಕರಿಗೆ ಮೊಬೈಲ್ ಬಳಕೆ ನಿಷೇದಿಸಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಭದ್ರತಾ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಪ್ರಶ್ನೆ ಪತ್ರಿಕೆ, ಭದ್ರತೆ ಕುರಿತು ಗಂಭೀರವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ:
ಜಿಲ್ಲೆಯಲ್ಲಿ ಇದೇ ಜೂನ್. 21 ರಿಂದ 28ರವರೆಗೆ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯು ಸುವ್ಯವಸ್ಥೆಯಿಂದ ನಡೆಯಲು ಹಾಗೂ ಯಾವುದೇ ಅವ್ಯವಹಾರಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರ 200 ಮೀಟರ್ ಪ್ರದೇಶದಲ್ಲಿ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದಾರೆ.
ಜಿಲ್ಲೆಯಾದ್ಯಂತೆ ಜೂನ್.21 ರಿಂದ 28ರವರೆಗೆ ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಸದರಿ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿ ಹಾಗೂ ಸದರಿ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು ಹಾಗೂ ಕೋಚಿಂಗ್ ಸೆಂಟರ್ಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ:
ವಿಜಯಪುರ ನಗರದಲ್ಲಿ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜ್, ಎಸ್.ಎಸ್.ಪದವಿಪೂರ್ವ ಕಾಲೇಜ್, ಬಾಗಲಕೋಟೆ ರಸ್ತೆಯಲ್ಲಿರುವ ಪಿಡಿಜೆ(ಎ) ಪ್ರೌಢ ಶಾಲೆ, ಬಿಡಿಇ ಬಾಲಕೀಯರ ಪ್ರೌಢಶಾಲೆ ಹಾಗೂ ಗಾಂಧಿಚೌಕ್ನಲ್ಲಿರುವ ಬಾಲಕೀಯರ ಸಕರ್ಾರಿ ಪದವಿಪೂರ್ವ ಕಾಲೇಜ್ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ವಿಜಯಪುರ ಗ್ರಾಮೀಣ ಪ್ರದೇಶದಲ್ಲಿ ತಿಕೋಟಾ ಎ.ಬಿ.ಜತ್ತಿ ಪದವಿಪೂರ್ವ ಕಾಲೇಜ್, ಬಬಲೇಶ್ವರದ ಶಾಂತವೀರ ಪದವಿಪೂರ್ವ ಕಾಲೇಜ್,, ಇಟ್ಟಂಗಿಹಾಳದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ತಿಡಗುಂದಿಯ ಮಾನಸಗಂಗೋತ್ರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ.
ಬಸವನಬಾಗೇವಾಡಿ:
ಸವನಬಾಗೇವಾಡಿಯ ಬಸವೇಶ್ವರ ಪದವಿಪೂರ್ವ ಕಾಲೇಜ್, ಬಸವನಬಾಗೇವಾಡಿಯ ಅಕ್ಕನಾಗಮ್ಮ ಬಾಲಕಿಯರ ಸಕರ್ಾರಿ ಪ್ರೌಢಶಾಲೆ ಪರೀಕ್ಷಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ.
ಮುದ್ದೇಬಿಹಾಳ:
ಮುದ್ದೇಬಿಹಾಳದ ಜ್ಞಾನಭಾರತಿ ವಿದ್ಯಾಮಂದಿರ ಪ್ರೌಢಶಾಲೆ ಹಾಗೂ ಚಿನ್ಮಯ ಆಂಗ್ಲ ಪ್ರೌಢಶಾಲೆ ಮತ್ತು ಎಂ.ಜಿ.ಎಂ.ಕೆ. ಪ್ರೌಢಾಲೆ ಹಾಗೂ ತಾಳಿಕೋಟೆಯ ಎಸ್.ಕೆ. ಪದವಿಪೂರ್ವ ಕಾಲೇಜ್ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ.
ಇಂಡಿ:
ಇಂಡಿಯ ಶಾಂತೇಶ್ವರ ಪದವಿಪೂರ್ವ ಕಾಲೇಜ ಪ್ರೌಢಶಾಲಾ ವಿಭಾಗ ಹಾಗೂ ಸಕರ್ಾರಿ ಆದರ್ಶ ವಿದ್ಯಾಲಯ ಇಂಡಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ.
ಚಡಚಣ ವಲಯ ಇಂಡಿ: ಚಡಚಣದ ಎಸ್.ಎಸ್.ಬಾಲಕರ ಪ್ರೌಢಶಾಲೆ ಹಾಗೂ ಎಂ.ಇ.ಎಸ್. ಪ್ರೌಢಶಾಲೆಯಲ್ಲಿ ಪರೀಕ್ಷೆಗಳು ಜರುಗಲಿವೆ.
ಸಿಂದಗಿ: ಸಿಂದಗಿಯ ಎಚ್.ಜಿ.ಪದವಿಪೂರ್ವ ಕಾಲೇಜ್, ಎಸ್.ಎಸ್.ಪಿ.ವ್ಹಿ.ವ್ಹಿ. ಪ್ರೌಢಶಾಲೆ, ಅಂಜುಮನ್ ಪದವಿಪೂರ್ವ ಕಾಲೇಜ್ ಹಾಗೂ ಪಿ.ಎಸ್.ಎಸ್.ಎಸ್.ಪಿ. ಕನ್ಯಾ ಪ್ರೌಢಶಾಲೆಯಲ್ಲಿ ಪರೀಕ್ಷೆಗಳು ಜರುಗಲಿವೆ.
ಸಭೆಯಲ್ಲಿ ಪೋಲಿಸ್ ಇಲಾಖೆಯ ಆರ್.ಎಸ್.ಚೌಧರಿ, ಎಸ್.ಎ.ಮುಜಾವರ, ಬಿಇಓ ಚಿಕ್ಕಮಠ, ಇಂಡಿ ಬಿಇಓ ಎಸ್.ಬಿ.ಬಿಂಗೇರಿ, ಸಿಂದಗಿ ಬಿಇಓ ಎಚ್.ಎಸ್.ನಾಗನೂರ ವಿಜಯಯಪುರ ಗ್ರಾಮೀಣ ಬಿಇಓ ಹುರಳಿ ಸೇರಿದಂತೆ ಇತರ ಶಿಕ್ಷಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.